ADVERTISEMENT

ಬೆಂಗಳೂರು | ದ್ವಿಚಕ್ರ ವಾಹನ ಕಳ್ಳತನ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2024, 15:56 IST
Last Updated 29 ಆಗಸ್ಟ್ 2024, 15:56 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ರಸ್ತೆ ಬದಿ ಹಾಗೂ ಮನೆಯ ಎದುರು ರಾತ್ರಿ ವೇಳೆ ನಿಲುಗಡೆಗೊಳಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಸೋರಹುಣಸೆಯ ಕಿರಣ್‌(20) ಬಂಧಿತ ಆರೋಪಿ.

ಆರೋಪಿಯಿಂದ ₹9 ಲಕ್ಷ ಮೌಲ್ಯದ 12 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ರಾಮಾ ಲೇಔಟ್‌ನಲ್ಲಿ ವಾಸವಿರುವ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನ ಕಳ್ಳತನದ ಸಂಬಂಧ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ವರ್ತೂರಿನ ಮತ್ಸಂದ್ರ ರಸ್ತೆಯಲ್ಲಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

‘ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಕೊಳ್ಳೇಗಾಲದಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಕಳ್ಳತನ ಮಾಡಿದ್ದ ದ್ವಿಚಕ್ರ ವಾಹನಗಳನ್ನು ವರ್ತೂರಿನ ಸೋರಹುಣಸೆಯ ನೀಲಗಿರಿ ತೋಪಿನಲ್ಲಿ ನಿಲುಗಡೆ ಮಾಡಿದ್ದ. ಅಲ್ಲಿಂದ ಎಲ್ಲ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

ಆರೋಪಿ ಬಂಧನದಿಂದ ಬೈಯಪ್ಪನಹಳ್ಳಿ, ಎಚ್‌ಎಸ್‌ಆರ್‌ ಲೇಔಟ್‌, ತಿಲಕ್‌ ನಗರ, ಮಡಿವಾಳ, ಪರಪ್ಪನ ಅಗ್ರಹಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಜಾಪುರ, ಕೊಳ್ಳೆಗಾಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

20 ಗ್ರಾಂ. ಚಿನ್ನಾಭರಣ ಜಪ್ತಿ: ಇದೇ ಪೊಲೀಸ್‌ ಠಾಣಾ ವ್ಯಾಪ್ತಿಯ ಸಾಯಿ ರೆಸಿಡೆನ್ಸಿಯಲ್ಲಿ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಕೋಗಿಲು ನಿವಾಸಿ ಅಜಿತ್‌ದಾಸ್‌ನನ್ನು ಪೊಲೀಸರು ಬಂಧಿಸಿದ್ದಾರೆ.

‘ಅಸ್ಸಾಂನ ಅಜಿತ್‌ರಾವ್‌ ಕೋಗಿಲಿನಲ್ಲಿ ಬಾಡಿಗೆ ಮನೆ ಪಡೆದು ನೆಲೆಸಿದ್ದ. ಮನೆ ಮಾಲೀಕರು ಸಂಬಂಧಿಕರ ಮನೆಗೆ ತೆರಳಿದ್ದ ವೇಳೆ ಬಾಲ್ಕನಿಯಲ್ಲಿರುವ ಸ್ಲೈಡ್‌ ಡೋರ್‌ ಒಡೆದು ಒಳಪ್ರವೇಶಿಸಿ 20 ಗ್ರಾಂ. ಚಿನ್ನಾಭರಣ ಕಳವು ಮಾಡಿದ್ದ. ಬಂಧಿತ ಆರೋಪಿಯಿಂದ ₹1.20 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.