ADVERTISEMENT

ದ್ವಿಚಕ್ರ ವಾಹನ ಕಳ್ಳತನ | ಐವರ ಬಂಧನ: ₹36 ಲಕ್ಷ ಮೌಲ್ಯದ 58 ವಾಹನ ಜಪ್ತಿ

​ಪ್ರಜಾವಾಣಿ ವಾರ್ತೆ
Published 15 ಜುಲೈ 2025, 14:29 IST
Last Updated 15 ಜುಲೈ 2025, 14:29 IST
<div class="paragraphs"><p>ಬಂಧನ </p></div>

ಬಂಧನ

   

ಬೆಂಗಳೂರು: ರಾಜಗೋಪಾಲನಗರ, ವೈಟ್‌ಫೀಲ್ಡ್‌, ಮಹದೇವಪುರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಐವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ₹36 ಲಕ್ಷ ಮೌಲ್ಯದ 58 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ADVERTISEMENT

ರಸ್ತೆಯ ಬದಿ ಹಾಗೂ ಮನೆಯ ಎದುರು ನಿಲುಗಡೆ ಮಾಡುತ್ತಿದ್ದ ದ್ವಿಚಕ್ರ ವಾಹನಗಳನ್ನು ನಕಲಿ ಕೀ ಬಳಸಿ ಕಳ್ಳತನ ಮಾಡಿಕೊಂಡು ವಿವಿಧ ಜಿಲ್ಲೆ ಹಾಗೂ ಹೊರರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ರಾಜಗೋಪಾಲನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ₹5.80 ಲಕ್ಷ ಮೌಲ್ಯದ 18 ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ವೈಟ್‌ಫೀಲ್ಡ್‌ ಠಾಣೆಯ ಪೊಲೀಸರು, ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ₹7 ಲಕ್ಷ ಮೌಲ್ಯದ 12 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿಕೊಳ್ಳುವಲ್ಲಿ ಯಶಸ್ವಿ ಆಗಿದ್ದಾರೆ. ಮಹದೇವಪುರ ಠಾಣೆಯ ಪೊಲೀಸರು, ಇಬ್ಬರನ್ನು ಬಂಧಿಸಿ 18 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.