ADVERTISEMENT

ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ; ಇಬ್ಬರು ಯುವತಿಯರ ಸಾವು

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 17:15 IST
Last Updated 14 ಸೆಪ್ಟೆಂಬರ್ 2021, 17:15 IST
   

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿಯ ಮೇಲ್ಸೇತುವೆಯಲ್ಲಿ ಮಂಗಳವಾರ ರಾತ್ರಿ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಯುವತಿಯರು ಮೃತಪಟ್ಟಿದ್ದಾರೆ.
ಯುವತಿಯರ ಹೆಸರು ಗೊತ್ತಾಗಿಲ್ಲ. ಪರಪ್ಪನ ಅಗ್ರಹಾರ ಠಾಣೆ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

‘ಮೇಲ್ಸೇತುವೆಯಲ್ಲಿ ಕಾರು – ದ್ವಿಚಕ್ರ ವಾಹನ ನಡುವೆ ಓವರ್‌ಟೆಕ್ ಮಾಡುವಾಗ ಅಪಘಾತವಾಗಿದೆ. ಯುವತಿಯರು ಮೇಲ್ಸೇತುವೆಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ಅವರ ದೇಹದ ಭಾಗಗಳು ಛಿದ್ರಗೊಂಡಿವೆ. ಕಾರು ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿವೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.