ADVERTISEMENT

ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 19:16 IST
Last Updated 22 ಜನವರಿ 2021, 19:16 IST
ಕರ್ನಾಟಕ ರಕ್ಷಣಾ ವೇದಿಕೆ ಜನಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಕರ್ನಾಟಕ ರಕ್ಷಣಾ ವೇದಿಕೆ ಜನಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಕೆ.ಆರ್ ಪುರ: ಬೆಳಗಾವಿ ಗಡಿ ವಿಚಾರದಲ್ಲಿ ಪದೇ ಪದೇ ತಗಾದೆ ತೆಗೆಯುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆಯನ್ನು ಖಂಡಿಸಿ ಕೆ.ಆರ್.ಪುರದ ಬಿಬಿಎಂಪಿ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆಯ ಜನಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಕರವೇ ಜನಸೇನೆ ಅಧ್ಯಕ್ಷ ಆರ್ .ಪಿ. ಗೋಪಾಲ್ ಗೌಡ ಮಾತನಾಡಿ, ‘ಬೆಳಗಾವಿ ಜಿಲ್ಲೆಯಲ್ಲಿ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ಮಿತಿಮೀರುತ್ತಿದೆ. ಇದಕ್ಕೆಲ್ಲಾ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡುತ್ತಿರುವ ಬೇಜವಾಬ್ದಾರಿ ಹೇಳಿಕೆಗಳು ಕಾರಣ’ ಎಂದರು.

ಜನಸೇನೆ ಸದಸ್ಯ ನಾಗರಾಜ್ ಗೌಡ, ಸುಜಾತ, ಮುರಳಿ, ತಾಯಪ್ಪ, ವರಲಕ್ಷ್ಮಿ , ಪ್ರಸನ್ನ ಕುಮಾರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.