ADVERTISEMENT

ಉದ್ಯೋಗ ಮೇಳ: 225 ಅಭ್ಯರ್ಥಿಗಳಿಗೆ ಉದ್ಯೋಗ ಭಾಗ್ಯ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2021, 21:08 IST
Last Updated 13 ಮಾರ್ಚ್ 2021, 21:08 IST
ಆಯ್ಕೆಯಾದ ಅಭ್ಯರ್ಥಿಯೊಬ್ಬರಿಗೆ ಶಾಸಕ ಸತೀಶ್‌ ರೆಡ್ಡಿ ಸಾಂಕೇತಿಕವಾಗಿ ನೇಮಕಾತಿ ಪತ್ರ ನೀಡಿದರು
ಆಯ್ಕೆಯಾದ ಅಭ್ಯರ್ಥಿಯೊಬ್ಬರಿಗೆ ಶಾಸಕ ಸತೀಶ್‌ ರೆಡ್ಡಿ ಸಾಂಕೇತಿಕವಾಗಿ ನೇಮಕಾತಿ ಪತ್ರ ನೀಡಿದರು   

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ಮತ್ತು ಉದ್ಯೋಗ ಇಲಾಖೆ ವತಿಯಿಂದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳದಲ್ಲಿ 225ಕ್ಕೂ ಹೆಚ್ಚು ಅಭ್ಯರ್ಥಿಗಳು ಉದ್ಯೋಗಾವಕಾಶ ಪಡೆದರು.

ನಗರದ ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ನಡೆದ ಈ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿಯವರು ಸಾಂಕೇತಿಕವಾಗಿ ನೇಮಕಾತಿ ಪತ್ರ ವಿತರಿಸಿದರು.

650ಕ್ಕೂ ಹೆಚ್ಚು ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದರು. 42ಕ್ಕೂ ಹೆಚ್ಚು ಕಂಪನಿಗಳು ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರನ್ನು ನೇಮಕ ಮಾಡಿಕೊಂಡರು.

ADVERTISEMENT

ಉದ್ಯೋಗ ವಿನಿಮಯ ಕೇಂದ್ರದ ಜಂಟಿ ನಿರ್ದೇಶಕ ಕೆ. ಶ್ರೀನಿವಾಸ್, ಕಾಲೇಜಿನ ಪ್ರಾಚಾರ್ಯ ಡಾ.ಎಂ. ವೆಂಕಟರಮಣರೆಡ್ಡಿ, ಉದ್ಯೋಗ ಮಾಹಿತಿ ಕೋಶದ ಅಧಿಕಾರಿ ಡಾ.ಆರ್. ನರ್ಮದಾ ಹಾಗೂ ಕಾಲೇಜಿನ ಉಪನ್ಯಾಸಕರು ಮಾರ್ಗದರ್ಶನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.