ಬೆಂಗಳೂರು: ನಗರದ ವಿವಿಧ ಪ್ರದೇಶಗಳಲ್ಲಿ ಅನಧಿಕೃತವಾಗಿ ಸಂಚರಿಸುತ್ತಿದ್ದ 68 ಟ್ರ್ಯಾಕ್ಟರ್‌ಗಳನ್ನು ಸಾರಿಗೆ ಇಲಾಖೆ ಮುಟ್ಟಗೋಲು ಹಾಕಿಕೊಂಡಿದೆ.
ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆಯು ಜಂಟಿಯಾಗಿ ಕಾರ್ಯಾಚರಣೆ ನಡೆಸಿತ್ತು. 250ಕ್ಕೂ ಅಧಿಕ ಟ್ರ್ಯಾಕ್ಟರ್‌ಗಳನ್ನು ತಪಾಸಣೆ ನಡೆಸಿತ್ತು. ಕಾನೂನು ಬಾಹಿರವಾಗಿ ಸಂಚರಿಸುತ್ತಿದ್ದ 119 ಟ್ರ್ಯಾಕ್ಟರ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 68 ಟ್ರ್ಯಾಕ್ಟರ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಸಾರಿ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.