ಪೀಣ್ಯ ದಾಸರಹಳ್ಳಿ: ಮೇದರಹಳ್ಳಿ ರೈಲ್ವೆ ಗೇಟ್ ಪಕ್ಕದಲ್ಲಿ ಅಂಡರ್‌ಪಾಸ್ ನಿರ್ಮಾಣ ಕಾಮಗಾರಿ ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.
ಸಾರ್ವಜನಿಕರ ದೂರಿನ ಮೇರೆಗೆ ಮುನಿರಾಜು ಅವರು ರೈಲ್ವೆ ಸಚಿವರ ಗಮನಕ್ಕೆ ತಂದು ಅಧಿಕಾರಿಗಳೊಂದಿಗೆ ಅಂಡರ್ ಪಾಸ್ ಮತ್ತು ಅಲ್ಲಿನ ಸ್ಥಳವನ್ನು ಶುಕ್ರವಾರ ಪರಿಶೀಲನೆ ಮಾಡಿದರು.
‘ಹಲವು ವರ್ಷಗಳ ಹಿಂದೆಯೇ ಕಾಮಗಾರಿ ಮುಗಿಯಬೇಕಿತ್ತು. ಆದರೆ ಸುರಂಗಮಾರ್ಗಕ್ಕೆ ಎರಡು ರಸ್ತೆ ನಿರ್ಮಾಣಕ್ಕೆ ಜಮೀನು ವಶಪಡಿಸಿಕೊಂಡು ಪರಿಹಾರ ನೀಡಲು ತಡವಾದ್ದರಿಂದ ಕಾಮಗಾರಿ ಅರ್ಧಕ್ಕೆ ನಿಂತಿದೆ. ಎಲ್ಲಾ ಸಮಸ್ಯೆ ಬಗೆಹರಿಸಿ ಆರು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.
ಸಂಜೆಯಾದರೆ ಪ್ರತಿ 20 ನಿಮಿಷಕ್ಕೆ ಒಂದರಂತೆ ರೈಲುಗಳು ಸಂಚರಿಸುವುದರಿಂದ ಹಳಿ ದಾಟಲು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಎದುರಾಗುತ್ತದೆ ಎಂದು ಸ್ಥಳೀಯರು ದೂರಿದ್ದರು.
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ರಾಜೇಶ್ ಕುಮಾರ್ ಸಿಂಗ್, ಪ್ರಧಾನ ವ್ಯವಸ್ಥಾಪಕ ವಿಜಯಕುಮಾರ್, ಸ್ಥಳೀಯ ಮುಖಂಡರಾದ ಬಿ. ಸುರೇಶ್, ಪಾಂಡುರಂಗ ರೆಡ್ಡಿ, ಸೋಮಶೇಖರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.