ADVERTISEMENT

ಯುಎನ್‌ಐ ಕಟ್ಟಡ ಗುತ್ತಿಗೆ ನವೀಕರಣ ವಿವಾದ; ಯಥಾಸ್ಥಿತಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 20:31 IST
Last Updated 12 ಫೆಬ್ರುವರಿ 2020, 20:31 IST

ಬೆಂಗಳೂರು: ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್ಐ) ಸುದ್ದಿ ವಾಹಿನಿಯ ಬೆಂಗಳೂರಿನ ಕಟ್ಟಡದ ಗುತ್ತಿಗೆ ನವೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್ ಆದೇಶಿಸಿದೆ.

ಬಿಬಿಎಂಪಿ ಕ್ರಮ ಪ್ರಶ್ನಿಸಿ ಯುಎನ್‌ಐ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಅರ್ಜಿ ಇತ್ಯರ್ಥವಾಗುವ ವರೆಗೆ ಕಟ್ಟಡವನ್ನು ಯಾರಿಗೂ ಗುತ್ತಿಗೆ ನೀಡದಂತೆ ಹಾಗೂ ಯಾವುದೇ ನವೀಕರಣ ಕಾಮಗಾರಿ ನಡೆಸದಂತೆ ಬುಧವಾರ ನಿರ್ದೇಶನ ನೀಡಿದೆ.

ಯುಎನ್ಐ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ, ‘ಅರ್ಜಿದಾರರು ತಮ್ಮ ಸ್ವಂತ ವೆಚ್ಚದಲ್ಲಿ ನಿರ್ಮಿಸಿದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಟ್ಟಡದ ಗುತ್ತಿಗೆ ನವೀಕರಿಸುವಂತೆ ಬಿಬಿಎಂಪಿಗೆ ಮನವಿ ಸಲ್ಲಿಸಿದ್ದರೂ, ಅದನ್ನು ಪರಿಗಣಿಸದೆ ಕಟ್ಟಡ ವಶಪಡಿಸಿಕೊಳ್ಳಲಾಗಿದೆ’ ಎಂಬ ವಿಷಯವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.