ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿದ್ದ ಸೂಚನೆಯನ್ನು ಲೆಕ್ಕಿಸದೇ, ಯುಎನ್ಐ ಸುದ್ದಿ ಸಂಸ್ಥೆಯ ಕಚೇರಿಯನ್ನು ಬಿಬಿಎಂಪಿ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದರು.
ಬಿಬಿಎಂಪಿ ಕಟ್ಟಡವನ್ನು ಯುಎನ್‌ಐ ಸುದ್ದಿ ಸಂಸ್ಥೆಗೆ ಭೋಗ್ಯಕ್ಕೆ ನೀಡಲಾಗಿತ್ತು. ಭೋಗ್ಯದ ಅವಧಿ ಮುಗಿದ ಬಳಿಕವೂ ನವೀಕರಿಸಿಲ್ಲ ಎಂಬ ಕಾರಣಕ್ಕೆ ಬಿಬಿಎಂಪಿ ಅಧಿಕಾರಿಗಳು ಕಚೇರಿಗೆ ಬೀಗ ಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.