ADVERTISEMENT

ಬೊಮ್ಮಾಯಿ ಹೇಳಿಕೆ ದುರದೃಷ್ಟಕರ: ಅಖಿಲ ಭಾರತ ವೀರಶೈವ ಮಹಾಸಭಾ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2025, 14:51 IST
Last Updated 18 ಸೆಪ್ಟೆಂಬರ್ 2025, 14:51 IST
<div class="paragraphs"><p>ಅಖಿಲ ಭಾರತ ವೀರಶೈವ ಲಿಂಗಾಯತ&nbsp;ಮಹಾಸಭಾ</p></div>

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ

   

(ಫೇಸ್‌ಬುಕ್‌ ಚಿತ್ರ)

ಬೆಂಗಳೂರು: ವೀರಶೈವ ಲಿಂಗಾಯತ ಏಕತಾ ಸಮಾವೇಶವು ಸರ್ಕಾರದ ವಿರುದ್ಧ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿರುವುದು ದುರದೃಷ್ಟಕರ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತಿಳಿಸಿದೆ.

ADVERTISEMENT

ಬೊಮ್ಮಾಯಿ ಯಾವ ಉದ್ದೇಶ ಇಟ್ಟುಕೊಂಡು ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಸೆ.19ರಂದು ಹಮ್ಮಿಕೊಂಡಿರುವ ಈ ಸಮಾವೇಶವು ಯಾವುದೇ ಧರ್ಮ, ಜಾತಿ ಅಥವಾ ಸರ್ಕಾರದ ವಿರುದ್ಧ ಅಲ್ಲ. ನಾವೆಲ್ಲ ಒಂದು ಎಂಬ ಸಂದೇಶವನ್ನು ಸಾರುವುದು ಮತ್ತು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಏನು ಬರೆಯಿಸಬೇಕೆಂಬ ಸ್ಪಷ್ಟ ನಿಲುವು ತಾಳುವುದು ಈ ಸಮಾವೇಶದ ಉದ್ದೇಶ ಎಂದು ಮಹಾಸಭಾದ ಕಾರ್ಯದರ್ಶಿ ಎಚ್.ಎಂ. ರೇಣುಕ ಪ್ರಸನ್ನ ತಿಳಿಸಿದ್ದಾರೆ.

ಸಮಾವೇಶದ ಬಗ್ಗೆ ಕೆಲವರು ಇಲ್ಲಸಲ್ಲದ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಿ, ಸಮಾಜದಲ್ಲಿ ಗೊಂದಲವನ್ನು ಉಂಟು ಮಾಡುತ್ತಿರುವುದನ್ನು ಮಹಾಸಭಾ ಖಂಡಿಸುತ್ತದೆ. ಇಂಥ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಸಮಾವೇಶದಲ್ಲಿ ಎಲ್ಲರೂ ಪಾಲ್ಗೊಂಡು ಸಮಾಜದ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.