ADVERTISEMENT

ಬೆಂಗಳೂರು: ಜ.24ಕ್ಕೆ ಯೂನಿವರ್ಸಲ್ ಕೋಚಿಂಗ್ ಸೆಂಟರ್‌ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 23:30 IST
Last Updated 21 ಜನವರಿ 2026, 23:30 IST
<div class="paragraphs"><p>ಕೋಚಿಂಗ್ ಸೆಂಟರ್‌ (ಸಾಂದರ್ಭಿಕ ಚಿತ್ರ)</p></div>

ಕೋಚಿಂಗ್ ಸೆಂಟರ್‌ (ಸಾಂದರ್ಭಿಕ ಚಿತ್ರ)

   

ಬೆಂಗಳೂರು: ಯೂನಿವರ್ಸಲ್ ಕೋಚಿಂಗ್ ಸೆಂಟರ್‌ನ 25ನೇ ವಾರ್ಷಿಕೋತ್ಸವ ಹಾಗೂ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮವನ್ನು ತಾವರೆಕೆರೆ ಹೋಬಳಿಯ ಗುರುರಾಯನಪುರದಲ್ಲಿರುವ ಯೂನಿವರ್ಸಲ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್‌ನಲ್ಲಿ ಜ.24ರಂದು ಸಂಜೆ 5ಕ್ಕೆ ಹಮ್ಮಿಕೊಳ್ಳಲಾಗಿದೆ.

ಎಂಆರ್‌ಜಿ ಸಮೂಹ ಸಂಸ್ಥೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೆ. ಪ್ರಕಾಶ ಶೆಟ್ಟಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪೊಲೀಸ್ ಉಪ ಮಹಾನಿರೀಕ್ಷಕ ರವಿ ಡಿ. ಚನ್ನಣ್ಣನವರ್, ಸಿಜಿಎಸ್‍ಟಿ, ಬೆಂಗಳೂರು ದಕ್ಷಿಣ ವಲಯ ಆಯುಕ್ತ ಕೊಟ್ರಸ್ವಾಮಿ ಎಂ., ಅನ್ನ ಕುರುಂಗಾ ಸೊಲ್ಯೂಷನ್ಸ್ ಪ್ರೈವೆಟ್ ಲಿಮಿಟೆಡ್ ನಿರ್ದೇಶಕ ಅಶೋಕ್ ಚನ್ನೇಗೌಡ ಭಾಗವಹಿಸಲಿದ್ದಾರೆ. 

ADVERTISEMENT

ಯೂನಿವರ್ಸಲ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್ಸ್ ಸಂಸ್ಥೆಯ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ.

ಮಾಹಿತಿಗೆ 98458 96655, 89519 32948 ಅಥವಾ www.universalinstitutions.com ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.