ಬೆಂಗಳೂರು: ‘ಮಹಿಳೆಯರು ಸಕಾಲದಲ್ಲಿ ಸಾಲ ಮರುಪಾವತಿ ಮಾಡುತ್ತಾರೆ. ಈ ನಂಬಿಕೆಯಿಂದ ಶ್ರೀ ತ್ಯಾಗರಾಜ ಕೋ- ಆಪರೇಟಿವ್ ಬ್ಯಾಂಕ್ ಯಾವುದೇ ಭದ್ರತೆ ಇಲ್ಲದೆ ಸಾಲ ನೀಡುತ್ತದೆ’ ಎಂದು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಿ.ಎನ್. ದೇವರಾಜ್ ಹೇಳಿದರು.
ಶ್ರೀ ತ್ಯಾಗರಾಜ ಕೋ- ಆಪರೇಟಿವ್ ಬ್ಯಾಂಕ್ ಆಯೋಜಿಸಿದ್ದ ‘ಮಹಿಳಾ ಉದ್ದಿಮೆದಾರರಿಗೆ ಸಾಲ ಸೌಲಭ್ಯ ವಿತರಣಾ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ಸ್ವ ಉದ್ಯೋಗ ಆರಂಭಿಸುವ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಬೇಕು. ಇದಕ್ಕಾಗಿ ತ್ಯಾಗರಾಜ ಬ್ಯಾಂಕ್‌ನಲ್ಲಿ ಭದ್ರತೆ ಇಲ್ಲದೆ ಸಾಲ ನೀಡಲಾಗುತ್ತಿದೆ. ಇದರಿಂದ ಮಹಿಳೆಯರು ಆರ್ಥಿಕವಾಗಿ ಸಬಲವಾಗುವುದರ ಜೊತೆಗೆ ದೇಶದ ಆರ್ಥಿಕತೆಗೆ ಕೊಡುಗೆ ನೀಡಲಿದ್ದಾರೆ. ಉದ್ಯೋಗದಲ್ಲಿ ಯಶಸ್ಸು ಗಳಿಸಿ, ಸಕಾಲದಲ್ಲಿ ಸಾಲ ಮರುಪಾವತಿಸಬೇಕು’ ಎಂದು ಸಲಹೆ ನೀಡಿದರು.
ಬ್ಯಾಂಕ್ ಅಧ್ಯಕ್ಷ ಎಂ.ಆರ್ ವೆಂಕಟೇಶ್ ಮಾತನಾಡಿ, ಮಹಿಳೆಯರ ಅಭಿವೃದ್ಧಿಗಾಗಿ ಬ್ಯಾಂಕಿನಿಂದ ನಮ್ಮ ಇತಿ-ಮಿತಿಯಲ್ಲಿ ಸಹಾಯ ಮಾಡುತ್ತಿದ್ದೇವೆ. ₹1 ಲಕ್ಷದಿಂದ ₹5 ಲಕ್ಷದವರೆಗೂ ಭದ್ರತೆ ಇಲ್ಲದೆ ಸಾಲ ನೀಡುವ ಮೂಲಕ, ಸ್ವ -ಉದ್ಯೋಗ ಆರಂಭಿಸಲು ಪ್ರೋತ್ಸಾಹ ನೀಡುತ್ತಿದ್ದೇವೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.