ಬೆಂಗಳೂರು: ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‌ಸಿ) ನಡೆಸುವ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯು ಮೇ 25ರಂದು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಆದೇಶಿಸಿದ್ದಾರೆ.
ನಗರದ 86 ಪರೀಕ್ಷಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಯು ಸುಗಮವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗಿದೆ. ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿ, ಕಂಪ್ಯೂಟರ್ ಸೆಂಟರ್ ಮುಚ್ಚುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.