ಬೆಂಗಳೂರು: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ತಾಯಿ ಸುಶೀಲಮ್ಮ (85) ಅವರು ಶನಿವಾರ ನಿಧನರಾದರು.
ಅವರಿಗೆ ಪುತ್ರಿ ಬಿ.ಎಸ್.ರಮಾದೇವಿಯೂ ಇದ್ದಾರೆ. ಬೈರತಿಯಲ್ಲಿರುವ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸ ಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಚಿವ ಸುರೇಶ್ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮದರ್ಶನಕ್ಕೆ ಇಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ಥಾವರಚಂದ್ ಗೆಹಲೋತ್, ಸಚಿವರಾದ ದಿನೇಶ್ ಗುಂಡೂರಾವ್, ರಹೀಂ ಖಾನ್, ಶಾಸಕರಾದ ಎಸ್. ಆರ್. ವಿಶ್ವನಾಥ್, ರಿಜ್ವಾನ್ ಅರ್ಷದ್, ಬೈರತಿ ಬಸವರಾಜ್ ಸೇರಿದಂತೆ ಅನೇಕರು ಸುಶೀಲಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.