ಅಲೆಮಾರಿ ಸಮುದಾಯದ ಮಹಿಳೆಯರು
ಬೆಂಗಳೂರು: ಅಲೆಮಾರಿ ಆಯೋಗ ರಚಿಸುವಂತೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಚನ್ನದಾಸರ, ಹೊಲೆಯದಾಸರ್, ಮಾಲದಾಸರ್ ಜನಸೇವಾ ಸಮಿತಿ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಬಸರಾಜ ನಾರಾಯಣಕರ, ‘ಅಲೆಮಾರಿ ಜನಾಂಗದ ವಸತಿರಹಿತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದಲ್ಲಿ ಮನೆ ನಿರ್ಮಿಸಿಕೊಳ್ಳಲು ₹5 ಲಕ್ಷ ನೀಡಬೇಕು’ ಎಂದು ಒತ್ತಾಯಿಸಿದರು.
ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಅಲೆಮಾರಿ ಸಮುದಾಯಗಳು ಹಿಂದುಳಿದಿದ್ದು, ಅವರ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು. ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಬೇಕು’ ಎಂದು ಆಗ್ರಹಿಸಿದರು.
‘ಅಲೆಮಾರಿ ಸಮುದಾಯಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನಿಂದ ಬೆಳಗಾವಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.