ADVERTISEMENT

ಬಯೋಡೀಸೆಲ್‌ ಮಾರಾಟಕ್ಕೆ ನೀಡಿ ಪರವಾನಗಿ: ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2025, 16:23 IST
Last Updated 3 ಮಾರ್ಚ್ 2025, 16:23 IST
ಕೆ.ಎಚ್‌. ಮುನಿಯಪ್ಪ
ಕೆ.ಎಚ್‌. ಮುನಿಯಪ್ಪ   

ಬೆಂಗಳೂರು: ಬಯೋಡೀಸೆಲ್‌ (ಬಿ–100) ಮಾರಾಟವನ್ನು ಪ್ರೋತ್ಸಾಹಿಸಲು  ರಾಜ್ಯ ಸರ್ಕಾರ ಪರವಾನಗಿ ನೀಡಬೇಕು ಎಂದು ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್‌.ಇ. ಸುಧೀಂದ್ರ ಆಗ್ರಹಿಸಿದರು.

ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಈ ಕುರಿತು ಚರ್ಚಿಸಿದರು.

‘ರೀಟೆಲ್‌ ಔಟ್‌ಲೆಟ್‌ಗಳನ್ನು ಆರಂಭಿಸಿ ಬಯೋಡೀಸೆಲ್‌ ಮಾರಾಟ ಮಾಡಬೇಕು. ಅದಕ್ಕೆ ಪರವಾನಗಿ ಅಗತ್ಯ. ಬಯೋಡೀಸೆಲ್‌ ಅನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು 2019ರಲ್ಲಿಯೇ ಅನುಮತಿ ನೀಡಿದೆ. ಅದಕ್ಕೆ ಪೂರಕವಾಗಿ ರಾಜ್ಯದಲ್ಲೂ ಅನುಮತಿ ನೀಡಬೇಕು’ ಎಂದು ಸಚಿವರ ಗಮನಕ್ಕೆ ತಂದರು.

ADVERTISEMENT

ಎಲ್ಲ ಜೈವಿಕ ಇಂಧನಗಳ ಉಸ್ತುವಾರಿಗಾಗಿ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯನ್ನು ನೋಡಲ್‌ ಏಜೆನ್ಸಿಯಾಗಿ ನೇಮಿಸದೇ ಹೋದರೆ ಎಲ್ಲ ಪ್ರಯತ್ನಗಳು ಅನುಷ್ಠಾನರೂಪಕ್ಕೆ ಬಾರದೇ ವ್ಯರ್ಥವಾಗಲಿದೆ ಎಂದು ಹೇಳಿದರು.

ಈ ಬಗ್ಗೆ ಪರಿಶೀಲಿಸಿ ಆದೇಶ ಹೊರಡಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮನೋಜ್‌ ಜೈನ್‌, ಆಯುಕ್ತೆ ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಎಲ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಆರ್‌. ಲೋಹಿತ್‌, ಯೋಜನಾ ಸಲಹೆಗಾರ ದಯಾನಂದ ಜಿ.ಎನ್‌. ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.