ADVERTISEMENT

ಪಕ್ಷ ಬಲಗೊಳಿಸಲು ಎಲ್ಲ ಶಕ್ತಿ ಬಳಕೆ: ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ

ಜೆಡಿಎಸ್‌: ಸಾಮಾಜಿಕ ಜಾಲತಾಣಕ್ಕೆ ಮೊರೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2020, 19:56 IST
Last Updated 13 ಫೆಬ್ರುವರಿ 2020, 19:56 IST
ಬೆಂಗಳೂರಿನಲ್ಲಿ ಗುರುವಾರ ಸಾಮಾಜಿಕ ಜಾಲತಾಣಗಳ ಸಕ್ರಿಯ ಬಳಕೆ ಕುರಿತ ಚರ್ಚೆಗೆ ಬಂದ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರನ್ನು ಅಭಿಮಾನಿಗಳು ತಮ್ಮ ಮೊಬೈಲ್ ಮೂಲಕ ಸೆರೆಹಿಡಿದು ಜಾಲತಾಣಕ್ಕೆ ಅಪ್‌ಲೋಡ್ ಮಾಡಿದರು
ಬೆಂಗಳೂರಿನಲ್ಲಿ ಗುರುವಾರ ಸಾಮಾಜಿಕ ಜಾಲತಾಣಗಳ ಸಕ್ರಿಯ ಬಳಕೆ ಕುರಿತ ಚರ್ಚೆಗೆ ಬಂದ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರನ್ನು ಅಭಿಮಾನಿಗಳು ತಮ್ಮ ಮೊಬೈಲ್ ಮೂಲಕ ಸೆರೆಹಿಡಿದು ಜಾಲತಾಣಕ್ಕೆ ಅಪ್‌ಲೋಡ್ ಮಾಡಿದರು   

ಬೆಂಗಳೂರು: ‘ಜೆಡಿಎಸ್‌ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವ ಸಂಕಲ್ಪ ಮಾಡಿದ್ದೇನೆ. ಸಾಮಾಜಿಕ ಜಾಲತಾಣಗಳ ನೆರವನ್ನು ಸಹ ಇದರಲ್ಲಿ ಶಕ್ತಿಯುತವಾಗಿ ಬಳಸಿಕೊಳ್ಳಲು ಯುವ ಪಡೆಗೆ ಸೂಚಿಸಿದ್ದೇನೆ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

ಗುರುವಾರ ಇಲ್ಲಿ ಪಕ್ಷದ ಸಾಮಾಜಿಕ ಜಾಲತಾಣ ಸಕ್ರಿಯ ಕಾರ್ಯಕರ್ತರ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪಕ್ಷ ತೀವ್ರ ಸಂಕಷ್ಟದಲ್ಲಿದ್ದಾಗಲೂ ಕುಗ್ಗಿರಲಿಲ್ಲ, ಅಧಿಕಾರದಲ್ಲಿದ್ದಾಗ ಹಿಗ್ಗಿರಲಿಲ್ಲ, ಪಕ್ಷ ಕಟ್ಟಲು ಯಾರ‍್ಯಾರಿಂದ ನೆರವು ಸಿಗುತ್ತದೋ, ಅದೆಲ್ಲವನ್ನೂ ಬಳಸಿಕೊಳ್ಳಲಾಗುತ್ತದೆ’ ಎಂದರು.

‘ಕುಮಾರಸ್ವಾಮಿ ಸರ್ಕಾರ ಜನತೆಗೆ ನೀಡಿದ ಕೊಡುಗೆಯನ್ನು ಸಮರ್ಥವಾಗಿ ಪ್ರಚಾರ ಮಾಡುವ ಕೆಲಸವನ್ನು ಸಾಮಾಜಿಕ ಜಾಲತಾಣಗಳು ಮಾಡಬೇಕು’ ಎಂದು ಅವರು ಸಲಹೆ ನೀಡಿದರು.

ADVERTISEMENT

ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷ ವೈ.ಎಸ್‌.ವಿ.ದತ್ತ, ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ಹಿರಿಯ ವಕೀಲ ಎಚ್‌.ಆರ್.ರಂಗನಾಥ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.