
ಪ್ರಜಾವಾಣಿ ವಾರ್ತೆ
ಬೆಂಗಳೂರು: ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಬಿ. ಟೆಕ್ ಮತ್ತು ಎಂ.ಟೆಕ್‌ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿ.29 ಕೊನೆಯ ದಿನ. ಎಐಸಿಟಿಇ ಪ್ರಕಾರ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆ ಇರುವ ಅಭ್ಯರ್ಥಿಗಳು ವಿ.ವಿಯ ವೆಬ್‌ಸೈಟ್ www.uvce.karnataka.gov.in ಮೂಲಕ ಅರ್ಜಿ ಪಡೆದು, ಭರ್ತಿ ಮಾಡಿದ ಬಳಿಕ ಅಗತ್ಯ ದಾಖಲೆಗಳೊಂದಿಗೆ ನಗರದ ಕೆ.ಆರ್ ವೃತ್ತದಲ್ಲಿರುವ ಯುವಿಸಿಇ ಕ್ಯಾಂಪಸ್‌ನಲ್ಲಿ ಸಂಬಂಧಿಸಿದ ವಿಭಾಗದ ಮುಖ್ಯಸ್ಥರಿಗೆ ಸಲ್ಲಿಸಬೇಕು. ಸಂದರ್ಶನದ ದಿನವನ್ನು ವೆಬ್‌ಸೈಟ್‌ನಲ್ಲಿ ಅಥವಾ ನೇರವಾಗಿ ಅಭ್ಯರ್ಥಿಗಳಿಗೆ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.