ADVERTISEMENT

ವಸತಿ ನಿಲಯಗಳು ಪುನರಾರಂಭ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 19:31 IST
Last Updated 23 ಜುಲೈ 2021, 19:31 IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜಿನ (ಯುವಿಸಿಇ) ಪದವಿ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇದೇ 26ರಿಂದ ಹಾಸ್ಟೆಲ್‌ಗಳನ್ನು ತೆರೆಯಲಾಗುವುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಬಿ.ಟೆಕ್‌ನ 1 ಮತ್ತು 3ನೇ ಸೆಮಿಸ್ಟರ್‌ ಹಾಗೂ ಬಿ.ಆರ್ಕ್‌ನ 1ನೇ ಸೆಮಿಸ್ಟರ್‌ನ ಪರೀಕ್ಷೆಗಳು ಇದೇ 28ರಿಂದ ಪ್ರಾರಂಭವಾಗಲಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಪ್ರೊ.ಎಚ್.ಎನ್. ರಮೇಶ್‌ ತಿಳಿಸಿದ್ದಾರೆ.

‘ಮರಳಿ ಕ್ಯಾಂಪಸ್‌ಗೆ ಸ್ವಾಗತ’

ADVERTISEMENT

ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ‘ಮರಳಿ ಕ್ಯಾಂಪಸ್‌ಗೆ ಸುಸ್ವಾಗತ’ ಕಾರ್ಯಕ್ರಮವನ್ನು ಇದೇ 26ರಂದು ಆಯೋಜಿಸಲಾಗಿದೆ.

ಬಹುದಿನಗಳಿಂದ ವಿಶ್ವವಿದ್ಯಾಲಯದ ಆವರಣದಿಂದ ದೂರ ಉಳಿದಿರುವ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಕಾರ್ಯಕ್ರಮ ಆಯೋಜಿಸಿದ್ದು, ಕುಲಪತಿ ಕಚೇರಿಯ ಆವರಣದಲ್ಲಿ ಬೆಳಿಗ್ಗೆ 11ಕ್ಕೆ ಕಾರ್ಯಕ್ರಮ ನಡೆಯಲಿದೆ. ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.