ADVERTISEMENT

ಮಹಾರಾಷ್ಟ್ರ ಸಿ.ಎಂ ಉದ್ಧವ್ ಠಾಕ್ರೆ ಕೀಳು ಮಟ್ಟದ ರಾಜಕೀಯ ಬಿಡಲಿ: ವಿ. ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 20:32 IST
Last Updated 20 ಡಿಸೆಂಬರ್ 2021, 20:32 IST
ನಗರದಲ್ಲಿ ಸೋಮವಾರ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಪರಿಹಾರ ಧನ ಮತ್ತು ಕೊಳೆಗೇರಿ ಮಂಡಳಿಯ ಹಕ್ಕು ಪತ್ರಗಳನ್ನು ಅರ್ಹ ಫಲಾನುಭವಿಗಳಿಗೆ ವಸತಿ ಸಚಿವ ವಿ. ಸೋಮಣ್ಣ ವಿತರಿಸಿದರು
ನಗರದಲ್ಲಿ ಸೋಮವಾರ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಪರಿಹಾರ ಧನ ಮತ್ತು ಕೊಳೆಗೇರಿ ಮಂಡಳಿಯ ಹಕ್ಕು ಪತ್ರಗಳನ್ನು ಅರ್ಹ ಫಲಾನುಭವಿಗಳಿಗೆ ವಸತಿ ಸಚಿವ ವಿ. ಸೋಮಣ್ಣ ವಿತರಿಸಿದರು   

ಬೆಂಗಳೂರು: ‘ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೀಳು ಮಟ್ಟದ ರಾಜಕೀಯ ಮಾಡುವುದನ್ನು ಕೈಬಿಡಲಿ’ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗರಭಾವಿ ವಾರ್ಡ್‌ನಲ್ಲಿ ಕೋವಿಡ್‌ನಿಂದ ಮೃತ
ಪಟ್ಟವರ ಕುಟುಂಬದ ಸದಸ್ಯರಿಗೆ ಪರಿಹಾರ ಧನ ಮತ್ತು ಕೊಳೆಗೇರಿ ಮಂಡಳಿಯ ಹಕ್ಕು ಪತ್ರಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಿ ಅವರು ಮಾತನಾಡಿದರು.

‘ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವ ಪ್ರಯತ್ನವನ್ನು ಯಾರೂ ಮಾಡಬಾರದು. ಭಾಷೆಗಳ ನಡುವೆ ಸ್ನೇಹ ಸಂಬಂಧ ಇರಬೇಕು’ ಎಂದು ಹೇಳಿದರು.

ADVERTISEMENT

‘ರಾಜ್ಯದಲ್ಲಿ 1,900ಕ್ಕೂ ಹೆಚ್ಚು ಕೊಳೆಗೇರಿಗಳಿವೆ. ಸರ್ಕಾರದ ವತಿಯಿಂದ 3.5 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುತ್ತಿದೆ’ ಎಂದರು.

ಬಿಜೆಪಿ ಯುವ ಮುಖಂಡ ಡಾ. ಅರುಣ್ ಸೋಮಣ್ಣ, ಗೋವಿಂದರಾಜನಗರ ಮಂಡಲದ ಬಿಜೆಪಿ ಅಧ್ಯಕ್ಷ ವಿಶ್ವನಾಥಗೌಡ, ಮುಖಂಡರಾದ ಮೋಹನ್ ಕುಮಾರ್, ವಾಗೇಶ್, ದಾಸೇಗೌಡ, ಪಲ್ಲವಿ ಚನ್ನಪ್ಪ, ರಾಮಪ್ಪ, ರಾಮಚಂದ್ರ, ಎಚ್. ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.