
ಗೀತಾ ಗಾಯನ
ಬೆಂಗಳೂರು: ಇದೇ 7ರಂದು ದೇಶದ 150 ಜಿಲ್ಲೆಗಳಲ್ಲಿ ‘ವಂದೇ ಮಾತರಂ’ ಗೀತೆಯ ಸಾಮೂಹಿಕ ಗಾಯನ ಆಯೋಜಿಸಿದ್ದು, ರಾಜ್ಯದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಬಾಗಲಕೋಟೆ, ಗದಗ, ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿಯ ರಾಜ್ಯ ಘಟಕದ ಉಪಾಧ್ಯಕ್ಷೆ ಮಾಳವಿಕ ಅವಿನಾಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಅಂದು ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ 300 ರಿಂದ 400 ಜನ ಸೇರಿ ಒಟ್ಟಾಗಿ ವಂದೇ ಮಾತರಂ ಸಾಮೂಹಿಕ ಗಾಯನ ಪ್ರಸ್ತುತಪಡಿಸಲಿದ್ದಾರೆ ಎಂದರು.
ದೇಶದಾದ್ಯಂತ ಬಿಜೆಪಿಯ ಎಲ್ಲ ಕಾರ್ಯಾಲಯಗಳಲ್ಲೂ ಸಾಮೂಹಿಕ ಗಾಯನ ನಡೆಯಲಿದೆ. ಪ್ರಧಾನಿ ಮೋದಿಯವರೂ ಈ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಹೆಚ್ಚುತ್ತಿರುವ ದೌರ್ಜನ್ಯ:
ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿವೆ. ಇದನ್ನು ಪ್ರತಿಯೊಬ್ಬರೂ ಪ್ರಶ್ನಿಸಬೇಕಾಗಿದೆ ಎಂದು ಮಾಳವಿಕ ಹೇಳಿದರು.
ಬೆಂಗಳೂರಿನಲ್ಲಿ ಅಕ್ಟೋಬರ್ 27ಕ್ಕೆ ಮಹಿಳೆ ಮೇಲೆ ಪೊಲೀಸರಿಂದಲೇ ದಾಳಿ ನಡೆದಿದೆ. ಬಳಿಕ ಆಟೊದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಅ.17 ರಂದು ಬ್ರೆಜಿಲ್‌ನ ರೂಪದರ್ಶಿ ಮೇಲೆ ದೌರ್ಜನ್ಯ ನಡೆದಿದೆ. ಎಂಜಿನಿಯರಿಂಗ್ ಕಾಲೇಜೊಂದರ ಶೌಚಾಲಯದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.