ರಮಾನಂದ ಸ್ವಾಮಿ ರಾಮಭದ್ರಾಚಾರ್ಯ ಅವರಿಗೆ ‘ವಾಗ್ದೇವಿ ಜ್ಞಾನ ಭಾಸ್ಕರ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರು: ಮಾರತಹಳ್ಳಿಯ ವಾಗ್ದೇವಿ ವಿಲಾಸ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಲಾ ಉತ್ಸವ-2025 ಕಾರ್ಯಕ್ರಮ ಶನಿವಾರ ಮುಕ್ತಾಯಗೊಂಡಿತು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಜಗದ್ಗುರು ರಮಾನಂದ ಸ್ವಾಮಿ ರಾಮಭದ್ರಾಚಾರ್ಯ ಅವರಿಗೆ ವಾಗ್ದೇವಿ ವಿಲಾಸ ಶಿಕ್ಷಣ ಸಂಸ್ಥೆಯಿಂದ ‘ವಾಗ್ದೇವಿ ಜ್ಞಾನ ಭಾಸ್ಕರ ರತ್ನ’ ಪ್ರಶಸ್ತಿಯನ್ನು ಸಮಾರೋಪ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ಅಂಕಣಕಾರ ವಿಕ್ರಮ್ ಸಂಪತ್ ಅವರಿಗೆ ‘ವಾಗ್ದೇವಿ ಇತಿಹಾಸ ರತ್ನಾಕರ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಾಗ್ದೇವಿ ವಿಲಾಸ ಸಂಸ್ಥೆಯ ಅಧ್ಯಕ್ಷ ಕೆ. ಹರೀಶ್ ಮತ್ತು ಶತಾವಧಾನಿ ಆರ್.ಗಣೇಶ್ ಉಪಸ್ಥಿತರಿದ್ದರು.
ಉತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಗಾಯನ, ನೃತ್ಯ, ಪ್ರಬಂಧ, ನಾಟಕ, ರಸಪ್ರಶ್ನೆ, ರಂಗೋಲಿ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲೆಯ ಆವರಣದಲ್ಲಿ ಮರಳು ಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ನಿರ್ಮಿಸಿದ್ದ ಮರಳುಶಿಲ್ಪ ಪ್ರಮುಖ ಆಕರ್ಷಣೆಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.