
ಬೆಂಗಳೂರು: ಶರವಣ ಚಾರಿಟಬಲ್ ಟ್ರಸ್ಟ್‌ನಿಂದ ವೈಕುಂಠ ಏಕಾದಶಿ ಅಂಗವಾಗಿ ಮಂಗಳವಾರ ಲಡ್ಡು ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಒಂದು ಲಕ್ಷ ಲಡ್ಡುಗಳನ್ನು ನುರಿತ ಬಾಣಸಿಗರು ತಯಾರಿಸಿದ್ದಾರೆ. ಬಸವನಗುಡಿಯ ಡಿವಿಜಿ ರಸ್ತೆಯ ಶ್ರೀ ಸಾಯಿ ಗೋಲ್ಡ್ ಪ್ಯಾಲೆಸ್‌ನ 3ನೇ ಮಹಡಿಯಲ್ಲಿರುವ ಶ್ರೀ ಸಾಯಿ ಪಾರ್ಟಿ ಹಾಲ್‌ನಲ್ಲಿ ಟ್ರಸ್ಟ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಅವರು ಪ್ರಸಾದಕ್ಕೆ ಪೂಜೆ ನೆರವೇರಿಸಿದರು.
ಪೂಜಾ ಕಾರ್ಯಕ್ರಮ ಹಾಗೂ ಪ್ರಸಾದ ವಿತರಣೆಗೆ ಟ್ರಸ್ಟ್ ಸದಸ್ಯರು, ಸ್ವಯಂಸೇವಕರು ಹಾಗೂ ಭಕ್ತರು ಕೈಜೋಡಿಸಿದರು.
ಬೆಂಗಳೂರಿನ ವಿವಿಧ ಕಡೆ ಇರುವ ವೆಂಕಟೇಶ್ವರ ದೇವಾಲಯಗಳಿಗೆ ಲಡ್ಡುಗಳನ್ನು ನೀಡಿದ್ದು, ಮಂಗಳವಾರ ಭಕ್ತರಿಗೆ ವಿತರಿಸಲಾಗುತ್ತದೆ. ವೈಕುಂಠ ಏಕಾದಶಿ ದಿನ ಮಹಾವಿಷ್ಣು ವೈಕುಂಠದ ಬಾಗಿಲು ತೆರೆಯುತ್ತಾನೆ ಎಂಬ ಧಾರ್ಮಿಕ ನಂಬಿಕೆಯ ಹಿನ್ನೆಲೆಯಲ್ಲಿ ಈ ಸೇವೆಯನ್ನು ಟ್ರಸ್ಟ್‌ನಿಂದ ನಡೆಸಿಕೊಂಡು ಬರಲಾಗುತ್ತಿದೆ.
‘ಶರವಣ ಚಾರಿಟಬಲ್ ಟ್ರಸ್ಟ್ ಹಲವು ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ಹಾಗೂ ಮಾನವೀಯ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ’ ಎಂದು ಟಿ.ಎ.ಶರವಣ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.