ಬ್ಯಾಟರಾಯನಪುರ ಕ್ಷೇತ್ರದ ಜಾಲಾ ಬ್ಲಾಕ್ ಕಾಂಗ್ರೆಸ್ ಸಮಿತಿ ಕಛೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಬೆಟ್ಟಹಲಸೂರು ಗ್ರಾಮಪಂಚಾಯಿತಿ ಉಪಾಧ್ಯಕ್ಷ ಬಿ.ಆರ್.ಪ್ರವೀಣ್, ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶ್,
ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಜಾಲಾ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಪುಷ್ಪಾರ್ಚನೆ ಸಲ್ಲಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸಿಹಿ ಹಂಚಿ ಸಂಭ್ರಮಿಸಿದರು.
ಬೆಟ್ಟ ಹಲಸೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶ್ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯವನ್ನು ರಚಿಸಿದ್ದಾರೆ. ಆ ಮೂಲಕ ಹಿಂದೂಧರ್ಮ ಮತ್ತು ಸಂಸ್ಕೃತ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ ಎಂದು ಬಣ್ಣಿಸಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಿ.ಆರ್.ಪ್ರವೀಣ್, ಬೆಂಗಳೂರು ಉತ್ತರ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರದೀಪ್, ಬ್ಯಾಟರಾಯನಪುರ ಕ್ಷೇತ್ರ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶಿವರಾಜ್.ಸಿ.ಎ, ಕಾಂಗ್ರೆಸ್ ಮುಖಂಡರಾದ ಬಿಲ್ಲಮಾರನಹಳ್ಳಿ ಪ್ರಭಾಕರ್, ಕುದುರೆಗೆರೆ ಮಂಜು, ಮುರಳಿ, ವೆಂಕಟೇಶ್, ಲೋಕೇಶ್, ಸುಜಾತಮ್ಮ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.