ADVERTISEMENT

₹94.80 ಲಕ್ಷ ಮೌಲ್ಯದ ಚಿನ್ನ ಜಪ್ತಿ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 10:04 IST
Last Updated 5 ನವೆಂಬರ್ 2020, 10:04 IST

ಬೆಂಗಳೂರು:ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ₹94.80 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ.

ನಿಲ್ದಾಣದ ಕಸ್ಟಮ್ಸ್ ಇಂಟಲಿಜೆನ್ಸ್ ಅಧಿಕಾರಿಗಳು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಚಿನ್ನ ಜಪ್ತಿ ಮಾಡಿದ್ದಾರೆ‌.

'ಚಿನ್ನ ಅಕ್ರಮ ಸಾಗಣೆ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಂಟಲಿಜೆನ್ಸ್ ಅಧಿಕಾರಿಗಳು ಸಹ ಮಾಹಿತಿ ಕಲೆ ಹಾಕುತ್ತಿದ್ದಾರೆ' ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ಹೇಳಿದರು.

ADVERTISEMENT

'ಎರಡು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ ₹94.80 ಲಕ್ಷ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ' ಎಂದೂ ತಿಳಿಸಿದರು‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.