ADVERTISEMENT

ಬೆಂಗಳೂರು: ವಂದೇ ಭಾರತ್ ರೈಲಿಗೆ ಸಿಲುಕಿ ಕೇರಳದ ವಿದ್ಯಾರ್ಥಿಗಳಿಬ್ಬರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2025, 14:17 IST
Last Updated 24 ನವೆಂಬರ್ 2025, 14:17 IST
ಸ್ಟೆರಿನ್ ಎಲ್ಜಾ ಸಜಿ, ಜಸ್ಟಿನ್ ಜೋಸೆಫ್  
ಸ್ಟೆರಿನ್ ಎಲ್ಜಾ ಸಜಿ, ಜಸ್ಟಿನ್ ಜೋಸೆಫ್     

ಬೆಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಕೇರಳದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಭಾನುವಾರ ಸಂಭವಿಸಿದೆ.

ಕೇರಳದ ಪತ್ತನಂತಿಟ್ಟ ನಿವಾಸಿಗಳಾದ ಜಸ್ಟಿನ್ ಜೋಸೆಫ್ (21) ಹಾಗೂ ಸ್ಟೆರಿನ್ ಎಲ್ಜಾ ಸಜಿ (19) ಮೃತರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ರೈಲ್ವೆ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಗರದ ನರ್ಸಿಂಗ್​ ಕಾಲೇಜಿನಲ್ಲಿ ಬಿಎಸ್‌ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್​ನಲ್ಲಿ ಓದುತ್ತಿದ್ದ ಇಬ್ಬರೂ ಸಮೀಪದ ಪೇಯಿಂಗ್ ಗೆಸ್ಟ್‌ನಲ್ಲಿ ವಾಸವಾಗಿದ್ದರು. ಭಾನುವಾರ ಸಂಜೆ ವೇಗವಾಗಿ ರೈಲು ಬರುವಾಗ ಹಳಿಗಳ ಮೇಲೆ ಬಂದ ಪರಿಣಾಮ, ಸ್ಥಳದಲ್ಲೇ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ.

ADVERTISEMENT

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆ ಬಳಿಕ ಪೋಷಕರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು.

‘ರೈಲಿನ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲಿಸಿದಾಗ ಮೇಲ್ನೋಟಕ್ಕೆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಮರಣ ಪತ್ರ ಸಿಕ್ಕಿಲ್ಲ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ’ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.