
ಸಾವು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಗೆರೆ ರಸ್ತೆಯಲ್ಲಿ ಎಸ್‌ಎಸ್‌ವಿಆರ್ ಕನ್ಸ್‌ಸ್ಟ್ರಕ್ಷನ್ ನಿರ್ಮಿಸುತ್ತಿರುವ ಅಪಾರ್ಟ್‌ಮೆಂಟ್ ಕಾಮಗಾರಿ ಸ್ಥಳದಲ್ಲಿ ಸರಕು ಸಾಗಣೆಯ ಲಿಫ್ಟ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಲಿಫ್ಟ್ ಆಪರೇಟರ್ ಸತ್ಯಕುಮಾರ್ ಹಾಗೂ ಲಿಫ್ಟ್ ಮೆಕಾನಿಕ್ ಮುತ್ತಪ್ಪ ಮೃತ ಕಾರ್ಮಿಕರು.
ಬುಧವಾರ ಸಂಜೆ ಕೆಲಸ ಮಾಡುತ್ತಿದ್ದ ವೇಳೆ ಲಿಫ್ಟ್ ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.
ಸತ್ಯಕುಮಾರ್ ಅವರ ಪತ್ನಿ ದೂರು ನೀಡಿದ್ದಾರೆ. ಗುತ್ತಿಗೆದಾರ ಸುಧೀರ್ ಹಾಗೂ ಎಂಜಿನಿಯರ್ ವಿರುದ್ಧ ನಿರ್ಲಕ್ಷ್ಯ ಆರೋಪದ ಅಡಿ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 106(1) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಶುಕ್ರವಾರ ಬೆಳಿಗ್ಗೆ ವೈದೇಹಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುವುದು ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.