
ಮಹಿಳಾ ಮತ: ಮಹಿಳೆ ಮೇಲೆ ದೌರ್ಜನ್ಯ ನಡೆಯುವುದು ಕುಟುಂಬದಿಂದಲೇ ಹೆಚ್ಚು!
ಬೆಂಗಳೂರು: ಮಹಿಳೆ ಮೇಲೆ ಪೊಲೀಸರು ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ವೈಟ್‌ಫೀಲ್ಡ್ ಉಪ ವಿಭಾಗದ ಡಿಸಿಪಿಗೆ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿ ಪತ್ರ ಬರೆದಿದ್ದಾರೆ.
ತಕ್ಷಣವೇ ಪರಿಶೀಲಿಸಿ ವರದಿ ನೀಡಬೇಕು. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ಹೊರರಾಜ್ಯದ ಮಹಿಳೆ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮಾಡುತ್ತಿದ್ದ ಫ್ಲ್ಯಾಟ್‌ನಲ್ಲಿ ಹಣ ಹಾಗೂ ಚಿನ್ನಾಭರಣ ಕಳ್ಳತನ ನಡೆದಿತ್ತು. ಕೆಲಸದಾಕೆಯ ಮೇಲೆ ಅನುಮಾನ ವ್ಯಕ್ತಪಡಿಸಿ ಫ್ಲ್ಯಾಟ್ ಮಾಲೀಕರು ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ವಿಚಾರಣೆ ನೆಪದಲ್ಲಿ ಥಳಿತ– ಆರೋಪ: ‘ವಿಚಾರಣೆಯ ನೆಪದಲ್ಲಿ ವಶಕ್ಕೆ ಪಡೆದುಕೊಂಡು ಹಲ್ಲೆ ನಡೆಸಿದ್ದಾರೆ. ಶೌಚಾಲಯಕ್ಕೆ ತೆರಳುವುದಕ್ಕೂ ಸಾಧ್ಯವಾಗುತ್ತಿಲ್ಲ ಎಂಬುದಾಗಿ ಮಹಿಳೆ ಆರೋಪ ಮಾಡಿದ್ದಾರೆ. ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ವರದಿಯನ್ನು ಶೀಘ್ರದಲ್ಲೇ ಆಯೋಗಕ್ಕೆ ಸಲ್ಲಿಸಬೇಕು’ ಎಂದು ಕಾರ್ಯದರ್ಶಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.