ADVERTISEMENT

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ: ವಸತಿ ಶಾಲೆ ನೌಕರರ ಧರಣಿ

​ಪ್ರಜಾವಾಣಿ ವಾರ್ತೆ
Published 26 ಮೇ 2025, 16:24 IST
Last Updated 26 ಮೇ 2025, 16:24 IST
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ವಸತಿ ಶಾಲೆಗಳ ನೌಕರರ ಸಂಘದ ಸದಸ್ಯರು ಸೋಮವಾರ ಧರಣಿ ಸತ್ಯಾಗ್ರಹ ನಡೆಸಿದರು
 -ಪ್ರಜಾವಾಣಿ ಚಿತ್ರ
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ವಸತಿ ಶಾಲೆಗಳ ನೌಕರರ ಸಂಘದ ಸದಸ್ಯರು ಸೋಮವಾರ ಧರಣಿ ಸತ್ಯಾಗ್ರಹ ನಡೆಸಿದರು  -ಪ್ರಜಾವಾಣಿ ಚಿತ್ರ   

ಬೆಂಗಳೂರು: ನಗದು ರಹಿತ ಚಿಕಿತ್ಸೆಗಾಗಿ ಜ್ಯೋತಿ ಸಂಜೀವಿನಿ ಯೋಜನೆ ವ್ಯಾಪ್ತಿಗೆ ತಮ್ಮನ್ನು ಸೇರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಸತಿ ಶಾಲೆಗಳ ನೌಕರರ ಸಂಘದ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರದಿಂದ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ ವಸತಿ ಶಾಲೆಗಳ ಕಾಯಂ ಶಿಕ್ಷಕರು, ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ವಸತಿ ಶಾಲೆಗಳನ್ನು ಸಿಬ್ಬಂದಿಯೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು, ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸಬೇಕು, ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡಬೇಕು, ಶೇ 10 ರಷ್ಟು ವಿಶೇಷ ಭತ್ಯೆ ನೀಡಬೇಕು ಎಂದು ವಸತಿ ಶಾಲೆಗಳ ನೌಕರರ ಸಂಘದ ಉಪಾಧ್ಯಕ್ಷೆ ಲಕ್ಷ್ಮಿ ಶೆಟ್ಟಿ ಒತ್ತಾಯಿಸಿದರು.

ADVERTISEMENT

ಬುಧವಾರದವರೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ. ಮೇ 29 ರಂದು ವಸತಿ ಶಾಲೆಯಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ, 30ರಂದು ತರಗತಿ ಬಹಿಷ್ಕಾರ, 31ರಂದು ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸುವುದು, ಜೂನ್‌ 1ರಂದು ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಲಾಗುವುದು ಎಂದು ಹೇಳಿದರು.

ಸಂಘದ ಅಧ್ಯಕ್ಷ ಪಿ.ಎನ್. ರವಿಚಂದ್ರ, ಉಪಾಧ್ಯಕ್ಷ ಎಸ್. ಗಿರೀಶ್, ಪ್ರಧಾನ ಕಾರ್ಯದರ್ಶಿ ಪಿ.ಕೆ. ನಟರಾಜ್‌ ಧರಣಿಯ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.