ಪೀಣ್ಯ ದಾಸರಹಳ್ಳಿ: ‘ಭಾರತವು ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತವಾಗಿರುವ ದೇಶ. ನಮ್ಮ ಧರ್ಮ, ಸಂಸ್ಕೃತಿ, ಆಚಾರ, ವಿಚಾರಗಳಿಗೆ ಜಗತ್ತಿನಲ್ಲಿ ಸರಿಸಾಟಿ ಇಲ್ಲ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಬಾಗಲಗುಂಟೆಯಲ್ಲಿ ಆಯೋಜಿಸಲಾದ ಹಿಮವತ್ ಕೇದಾರ ಪೀಠದ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮ ಜನ ಜಾಗೃತಿ ಸಮಾರಂಭದಲ್ಲಿ ‘ವೀರಶೈವ ಧರ್ಮ ಕೇಸರಿ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು.
‘ವಿದೇಶಗಳಲ್ಲಿ ಒಂದು ಭಾಷೆ, ಒಂದು ಸಂಸ್ಕೃತಿ ಇರುತ್ತದೆ. ಆದರೆ, ನೂರಾರು ಭಾಷೆ, ಸಮುದಾಯಗಳು ಇದ್ದರೂ ಸಂಸ್ಕೃತಿ ಉಳಿಸಿಕೊಂಡಿರುವುದು ನಮ್ಮ ದೇಶದ ಹೆಮ್ಮೆ’ ಎಂದರು.
ಶಾಸಕ ಎಸ್. ಮುನಿರಾಜು, ಸಚಿವ ಈಶ್ವರ್ ಖಂಡ್ರೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ, ಅಬಕಾರಿ ಅಧಿಕಾರಿ ಡಾ. ಹಿರೇಮಠ, ಸಾಹಿತಿ ವೈ.ಬಿ.ಎಚ್. ಜಯದೇವ್, ಸಂಘದ ಅಧ್ಯಕ್ಷ ಕಾಯಕಯೋಗಿ ಬಸವರಾಜಣ್ಣ, ಮಾಜಿ ಮೇಯರ್ ಗಂಗಾಂಬಿಕೆ, ನಟ ಕೆ.ವಿ. ನಾಗರಾಜಮೂರ್ತಿ ಮತ್ತು ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.