ADVERTISEMENT

ವೀರಶೈವ –ಲಿಂಗಾಯತ ಬೇರೆಯಲ್ಲ, ಸವಾಲು ಎದುರಿಸಲು ಒಗ್ಗಟ್ಟಾಗಿರಿ: ಶಾಮನೂರು ಶಿವಶಂಕರಪ್ಪ

ವೀರಶೈವ ಲಿಂಗಾಯತ ಸಚಿವರು, ಶಾಸಕರ ಅಭಿನಂದನಾ ಕಾರ್ಯಕ್ರಮದಲ್ಲಿ

​ಪ್ರಜಾವಾಣಿ ವಾರ್ತೆ
Published 6 ಜುಲೈ 2023, 23:30 IST
Last Updated 6 ಜುಲೈ 2023, 23:30 IST
ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಯೋಜಿಸಿದ್ದ ಸಮಾರಂಭದಲ್ಲಿ ಶಾಸಕರು ಮತ್ತು ಸಚಿವರನ್ನು ಅಭಿನಂದನನೆ ಸಲ್ಲಿಸಲಾಯಿತು.
ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಯೋಜಿಸಿದ್ದ ಸಮಾರಂಭದಲ್ಲಿ ಶಾಸಕರು ಮತ್ತು ಸಚಿವರನ್ನು ಅಭಿನಂದನನೆ ಸಲ್ಲಿಸಲಾಯಿತು.   -ಪ್ರಜಾವಾಣಿ ಚಿತ್ರ

ಬೆಂಗಳೂರು: ‘ವೀರಶೈವ–ಲಿಂಗಾಯತ ಬೇರೆ ಬೇರೆಯಲ್ಲ, ಒಂದೇ. ಯಾವುದೇ ಸವಾಲುಗಳನ್ನು ಎದುರಿಸಲು ನಾವು ಒಗ್ಗಟ್ಟಾಗಿರಬೇಕು’ ಎಂದು ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.

ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾ ವತಿಯಿಂದ ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವೀರಶೈವ ಲಿಂಗಾಯತ ನೂತನ ಸಚಿವರು, ಶಾಸಕರ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಹಿಂದೆ ನಮ್ಮ ಸಮಾಜವನ್ನು ಒಡೆಯುವ ಪ್ರಯತ್ನಗಳಾದಾಗ ಮಹಾಸಭಾ ಕೈಗೊಂಡ ನಿರ್ಧಾರದಿಂದಾಗಿ ಅವರ ಪ್ರಯತ್ನ ಕೈಗೂಡಿಲ್ಲ. ಮುಂದೆ ಸಮಯ ಬರುತ್ತದೆ. ಆಗ ನಾವು ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ’ ಎಂದು ತಿಳಿಸಿದರು.

ADVERTISEMENT

ಮಹಾಪ್ರಧಾನ ಕಾರ್ಯದರ್ಶಿ ಈಶ್ವರ ಬಿ. ಖಂಡ್ರೆ ಮಾತನಾಡಿ, ‘ಕರ್ನಾಟಕ ಶಿಕ್ಷಣದಲ್ಲಿ ಮುಂದೆ ಇರಲು ವೀರಶೈವ ಲಿಂಗಾಯತ ಮಠಗಳು ಕಾರಣ. ನಮ್ಮ ಮಠಗಳು ಜಾತಿ, ಧರ್ಮ ನೋಡದೇ ಎಲ್ಲರಿಗೂ ಶಿಕ್ಷಣ ನೀಡುತ್ತಾ ಬಂದಿವೆ. ನಮ್ಮ ಸಮಾಜ ಒಡೆದರೆ ಕರ್ನಾಟಕ ಚೂರಾಗುತ್ತದೆ. ನಾವು ಒಂದಾಗಿದ್ದರೆ, ರಾಜ್ಯ ಅಭಿವೃದ್ಧಿಯಾಗುತ್ತದೆ’ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾತನಾಡಿ, ‘ವೀರಶೈವ ಲಿಂಗಾಯತ ಒಳಪಂಗಡಗಳು ಒಂದಾಗಬೇಕು. ಆಗ ಕರ್ನಾಟಕದಲ್ಲಿ ಸಮಾಜ ಮತ್ತಷ್ಟು ಸದೃಢವಾಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.