ನೈಸ್ ರಸ್ತೆ (ಸಾಂದರ್ಭಿಕ ಚಿತ್ರ)
ಬೆಂಗಳೂರು: ನೈಸ್ ರಸ್ತೆ ಗ್ರಾಯತ್ರಿ ಕ್ರಷರ್ ಬಳಿ ಬೊಲೆರೊ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಬದಿಗೆ ಉರುಳಿ ಬಿದ್ದ ಪರಿಣಾಮ, ವಾಹನದಲ್ಲಿದ್ದ 18 ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿವೆ. ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಶಿವಾನಂದ ಅವರು ವಿಜಯಪುರದಿಂದ ತಮಿಳುನಾಡಿನ ಸೇಲಂಗೆ 40 ಮೇಕೆಗಳನ್ನು ಬೊಲೆರೊ ವಾಹನದಲ್ಲಿ ಕೊಂಡೊಯ್ಯುತ್ತಿದ್ದರು. ನೈಸ್ ರಸ್ತೆಯ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದ ವಾಹನ ಉರುಳಿ ಬಿದ್ದಿದೆ. ಅದರಲ್ಲಿ 22 ಮೇಕೆಗಳು ಬದುಕುಳಿದಿವೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ. ನಿಗದಿಗಿಂತ ಹೆಚ್ಚಿನ ಭಾರ ತುಂಬಿದ್ದರಿಂದ ವಾಹನ ಉರುಳಿ ಬಿದ್ದಿದೆ. ಚಾಲಕ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.