ADVERTISEMENT

ಅನಗತ್ಯ ಸಂಚಾರ: 941 ವಾಹನ ಜಪ್ತಿ

​ಪ್ರಜಾವಾಣಿ ವಾರ್ತೆ
Published 19 ಮೇ 2021, 19:57 IST
Last Updated 19 ಮೇ 2021, 19:57 IST

ಬೆಂಗಳೂರು: ಲಾಕ್‌ಡೌನ್ ಅವಧಿಯಲ್ಲಿ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಸಂಚರಿಸುತ್ತಿದ್ದ941 ವಾಹನಗಳನ್ನು ಪೊಲೀಸರು ಬುಧವಾರ ಜಪ್ತಿ ಮಾಡಿದ್ದಾರೆ.

ನಗರದಾದ್ಯಂತ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ870 ದ್ವಿಚಕ್ರ ವಾಹನಗಳು, 37 ತ್ರಿಚಕ್ರ ವಾಹನಗಳು ಹಾಗೂ 34 ನಾಲ್ಕು ಚಕ್ರದ ವಾಹನಗಳು ಜಪ್ತಿಯಾಗಿವೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಕಾಯ್ದೆಯಡಿ ಆರು ಪ್ರಕರಣಗಳು ದಾಖಲಾಗಿವೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.