ADVERTISEMENT

ಸೀಜ್ ಮಾಡಿದ್ದ ವಾಹನ, ಮಾಲೀಕರಿಗೆ ಮರಳಿಸಲು ಕ್ರಮ: ಪೊಲೀಸ್ ಆಯುಕ್ತ ಭಾಸ್ಕರ್‌ರಾವ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಏಪ್ರಿಲ್ 2020, 4:21 IST
Last Updated 30 ಏಪ್ರಿಲ್ 2020, 4:21 IST
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್   

ಬೆಂಗಳೂರು: ಕೊರೊನಾ ಸೋಂಕು ಹರಡುವುದನ್ನು ತಡೆಯಲೆಂದು ಲಾಕ್‌ಡೌನ್ ಘೋಷಿಸಿದ್ದ ಸಂದರ್ಭದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ವಾಹನಗಳನ್ನು ಅವುಗಳ ಮಾಲೀಕರಿಗೆ ಮರಳಿಸಲಾಗುವುದು ಎಂದು ಪೊಲೀಸ್ ಆಯುಕ್ತ ಭಾಸ್ಕರ್‌ ರಾವ್ ಟ್ವೀಟ್ ಮಾಡಿದ್ದಾರೆ.

ಅನುಕ್ರಮವಾಗಿಮೊದಲು ಸೀಜ್‌ ಮಾಡಿದ್ದ ವಾಹನಗಳನ್ನು ಮೊದಲು ಮರಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ವಾಹನಗಳನ್ನು ಮರಳಿಸುವ ಮುನ್ನ ದಾಖಲೆಗಳನ್ನು ಪರಿಶೀಲಿಸಲಾಗುವುದು. ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಅನುಮೋದನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಒಟ್ಟಾರೆ ಪ್ರಕ್ರಿಯೆಯನ್ನು ಸರಳೀಕರಿಸುವ ಕೆಲಸ ಶುರುವಾಗಿದೆ. ಶೀಘ್ರ ವಾಹನಗಳನ್ನು ಮರಳಿಸುವ ಕಾರ್ಯ ಆರಂಭವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.