
ಕೆ.ಆರ್.ಪುರ: ಮಹಾಯೋಗಿ ವೇಮನ ಮತ್ತು ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರು ಜಾತಿ ಭೇದ ತೊರೆದು ಸಮಾಜ ಒಗ್ಗಟ್ಟಾಗಿ ಬದುಕಬೇಕು ಎಂಬ ಸಂದೇಶವನ್ನು ಸಾರಿದವರು ಎಂದು ಶಾಸಕಿ ಮಂಜುಳಾ ಲಿಂಬಾವಳಿ ಹೇಳಿದರು.
ಮಹದೇವಪುರ ಕ್ಷೇತ್ರದ ದೊಡ್ಡಕನ್ನೆಲ್ಲಿಯ ಶ್ರೀವೇಮನ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ವೇಮನ ಹಾಗೂ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಾಜದಲ್ಲಿ ಸಾಮರಸ್ಯ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಲು ತಮ್ಮ ಸಂಪೂರ್ಣ ಜೀವನವನ್ನೇ ಸಮಾಜಕ್ಕೆ ಅರ್ಪಿಸಿದ ಮಹಾನ್ ವ್ಯಕ್ತಿತ್ವಗಳು. ಇವರಿಬ್ಬರು ತಮ್ಮ ವಚನಗಳ ಮೂಲಕ ಜನಮನಗಳಲ್ಲಿ ಉಳಿದಿದ್ದಾರೆ ಎಂದರು.
ಮಾಜಿ ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ ಮಾತನಾಡಿ, ‘ವೇಮನ ಜನಸಾಮಾನ್ಯರ ಭಾಷೆಯಲ್ಲಿ ಜೀವನದ ಸತ್ಯ, ನೈತಿಕತೆ, ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಸಾರಿದವರು ಎಂದು ತಿಳಿಸಿದರು.
ಮಾಜಿ ಶಾಸಕ ಅರವಿಂದ ಲಿಂಬಾವಳಿ, ವಿಧಾನ ಪರಿಷತ್ ಸದಸ್ಯ ಎಚ್.ಎಸ್. ಗೋಪಿನಾಥ ರೆಡ್ಡಿ, ರಾಜ್ಯಸಭಾ ಮಾಜಿ ಸದಸ್ಯ ಕೆ.ಸಿ. ರಾಮಮೂರ್ತಿ, ನಗರ ಮಂಡಲ ಅಧ್ಯಕ್ಷ ಶ್ರೀಧರ ರೆಡ್ಡಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಎಚ್.ಎಸ್. ಪಿಳ್ಳಪ್ಪ, ರಾಜ್ಯ ಬಿಜೆಪಿ ಪರಿಷತ್ ಸದಸ್ಯ ಎಲ್. ರಾಜೇಶ್, ಮನೋಹರರೆಡ್ಡಿ, ಪ್ರದೀಪ್ ಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.