ADVERTISEMENT

ದ್ವೇಷ ಭಾಷಣ ನಿಷೇಧ ಮಸೂದೆಗೆ ವಿರೋಧ: ರಾಜ್ಯಪಾಲರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 26 ಜನವರಿ 2026, 15:56 IST
Last Updated 26 ಜನವರಿ 2026, 15:56 IST
ಧ್ವೇಷ ಭಾಷಣ ನಿಷೇಧ ಮಸೂದೆಗೆ ವಿರೋಧ ವ್ಯಕ್ತಪಡಿಸಿ ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ಪದಾಧಿಕಾರಿಗಳು, ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್ ಅವರಿಗೆ ಮನವಿ ಸಲ್ಲಿಸಿದರು  
ಧ್ವೇಷ ಭಾಷಣ ನಿಷೇಧ ಮಸೂದೆಗೆ ವಿರೋಧ ವ್ಯಕ್ತಪಡಿಸಿ ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ಪದಾಧಿಕಾರಿಗಳು, ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್ ಅವರಿಗೆ ಮನವಿ ಸಲ್ಲಿಸಿದರು     

ಬೆಂಗಳೂರು: ದ್ವೇಷ ಭಾಷಣ ನಿಷೇಧ ಮಸೂದೆಗೆ ಒಪ್ಪಿಗೆ ಸೂಚಿಸದಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ಪದಾಧಿಕಾರಿಗಳು, ರಾಜ್ಯಪಾಲ ಥಾವರಚಂದ್‌ ಗೆಹಲೋತ್ ಅವರನ್ನು ಭೇಟಿ ಸೋಮವಾರ ಮಾಡಿ ಮನವಿ ಸಲ್ಲಿಸಿದರು. 

ಮಸೂದೆಯು ಅಸಂವಿಧಾನಿಕವಾಗಿದೆ ಎಂದು ಪದಾಧಿಕಾರಿಗಳು ಆಕ್ರೋಶ ಹೊರಹಾಕಿದರು.

ಸಂವಿಧಾನದ ಅಡಿಯಲ್ಲಿ ತಮಗೆ ನೀಡಲಾಗಿರುವ ಅಧಿಕಾರವನ್ನು ಬಳಸಿ ಮಸೂದೆಗೆ ತಡೆಯೊಡ್ಡಬೇಕು. ಅಲ್ಲದೇ ರಾಷ್ಟ್ರಪತಿಗೆ ಕಳುಹಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಈ ಸಂದರ್ಭದಲ್ಲಿ ಪ್ರಾಂತ ಕಾರ್ಯದರ್ಶಿ ಬಿ.ಇ.ಸುರೇಶ, ಪ್ರಾಂತ ಕಾನೂನು ಪ್ರಮುಖ ಪ್ರಕಾಶ್ ಶೆಟ್ಟಿ, ಕಶ್ಯಪ ಮತ್ತು ಮುನಿರಾಜು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.