
ಬೆಂಗಳೂರು: ‘ವಿದ್ಯಾರ್ಥಿಗಳು ಜ್ಞಾನ ಹಾಗೂ ಕೌಶಲದ ಜತೆಗೆ ಸಾಮಾಜಿಕ ಹೊಣೆಗಾರಿಕೆ ಹಾಗೂ ಮಾನವೀಯ ಸಂವೇದನೆಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ರಮೇಶ್ ತಿಳಿಸಿದರು.
ಸೆಂಟ್ರಲ್ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಯುವ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿಗಳ ಸಭೆ ಮತ್ತು ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
‘ಮಹಿಳೆಯರು ಮತ್ತು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದು, ಗ್ರಾಮೀಣ ಪ್ರದೇಶಗಳ ಜನರು ಗಂಭೀರ ಆರೋಗ್ಯ ಬಿಕ್ಕಟ್ಟಿನ ಸಮಸ್ಯೆ ಎದುರಿಸುತ್ತಿದ್ದಾರೆ. ರಕ್ತದಾನ ಮಾಡುವುದು, ರಸ್ತೆ ಅಪಘಾತ, ದುರಂತಗಳ ಸಂದರ್ಭದಲ್ಲಿ ನೆರವಾಗುವಂತಹ ಸೇವಾ ಮನೋಭಾವವನ್ನು ಉತ್ತೇಜಿಸಲು ವಿಶ್ವವಿದ್ಯಾಲಯ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಿದೆ’ ಎಂದು ತಿಳಿಸಿದರು.
ರೆಡ್ ಕ್ರಾಸ್ ಸಂಸ್ಥೆಯ ನಗರ ಜಿಲ್ಲಾ ಕಾರ್ಯದರ್ಶಿ ಡಾ.ರಾಜೇಶ್, ರಾಜ್ಯ ಸಂಯೋಜಕ ಆನಂದ್, ಹಿರಿಯ ಸಲಹೆಗಾರ ಸಿ.ಎನ್.ಎನ್.ರಾಜು ಶಿಬಿರಾರ್ಥಿಗಳಿಗೆ ಉಪನ್ಯಾಸ ಮತ್ತು ಮಾರ್ಗದರ್ಶನ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.