ADVERTISEMENT

ನಕಲಿ ಪ್ರಮಾಣಪತ್ರ: ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶಂಕರ್ ಅಮಾನತು

​ಪ್ರಜಾವಾಣಿ ವಾರ್ತೆ
Published 21 ಮೇ 2025, 15:06 IST
Last Updated 21 ಮೇ 2025, 15:06 IST
ವಿಕ್ಟೋರಿಯಾ ಆಸ್ಪತ್ರೆ ಕಟ್ಟಡ
ವಿಕ್ಟೋರಿಯಾ ಆಸ್ಪತ್ರೆ ಕಟ್ಟಡ   

ಬೆಂಗಳೂರು: ನಕಲಿ ವೈದ್ಯಕೀಯ ಪ್ರಮಾಣಪತ್ರ ವಿತರಣೆ ಹಾಗೂ ಭ್ರಷ್ಟಾಚಾರದ ಆರೋಪದ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ತುರ್ತುಚಿಕಿತ್ಸಾ ವೈದ್ಯಾಧಿಕಾರಿ ಡಾ. ಶಂಕರ್ ಕೆ.ಎನ್. ಅವರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತು ಮಾಡಿದೆ. 

ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.

‘ಡಾ. ಶಂಕರ್ ಕೆ.ಎನ್. ಅವರು ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡುತ್ತಿರುವುದು ಹಾಗೂ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಖಾಸಗಿ ಸುದ್ದಿವಾಹಿನಿಯೊಂದು ಪ್ರಸಾರ ಮಾಡಿದೆ. ಈ ಪ್ರಕರಣದಲ್ಲಿ ದೊರಕಿದ ದಾಖಲೆಗಳು ಹಾಗೂ ಘಟನೆಯನ್ನು ಪರಿಶೀಲಿಸಿದಾಗ ಮೆಲ್ನೋಟಕ್ಕೆ ಆರೋಪ ಎಸಗಿದಂತೆ ಕಂಡುಬಂದಿದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. 

ADVERTISEMENT

‘ತಕ್ಷಣ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಅವರನ್ನು ಅಮಾನತಿನಲ್ಲಿ ಇರಿಸಲಾಗುವುದು’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.