ADVERTISEMENT

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ರೋಗಿಗಳು ಸ್ಥಳಾಂತರ

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 4:50 IST
Last Updated 1 ಜುಲೈ 2025, 4:50 IST
<div class="paragraphs"><p>ವಿಕ್ಟೋರಿಯಾ ಆಸ್ಪತ್ರೆ</p></div>

ವಿಕ್ಟೋರಿಯಾ ಆಸ್ಪತ್ರೆ

   

ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯಗಳ ವಾರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳನ್ನು ಆಸ್ಪತ್ರೆಯ ಎಚ್ ಬ್ಲಾಕ್‌ಗೆ ಸ್ಥಳಾಂತರ ಮಾಡಲಾಗಿದೆ.

ಮಂಗಳವಾರ ಬೆಳಿಗ್ಗೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದ್ದಾರೆ. ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ, ಚಿಕಿತ್ಸೆ ಮುಂದುವರಿಸಲಾಗಿದೆ.

ADVERTISEMENT

ಈ ವಾರ್ಡ್‌ನಲ್ಲಿ ಒಟ್ಟು 26 ರೋಗಿಗಳಿದ್ದರು. ಅದರಲ್ಲಿ 14 ಪುರುಷರು, 5 ಮಹಿಳೆಯರು ಮತ್ತು 7 ಮಕ್ಕಳು ಇದ್ದು, ಐಸಿಯುನಲ್ಲಿ 5 ರೋಗಿಗಳನ್ನು ದಾಖಲಿಸಲಾಗಿತ್ತು.

‘ಹೊಗೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ರೋಗಿಗಳನ್ನು ಸ್ಥಳಾಂತರ ಮಾಡಿದೆವು. ಎಲ್ಲ ರೋಗಿಗಳು, ರೋಗಿಯ ಸಹಾಯಕರು, ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ’ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಡೀನ್ ಡಾ. ರಮೇಶ್ ಕೃಷ್ಣ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.