ಅಮಾನತು
ಬೆಂಗಳೂರು: ಸಂವಿಧಾನ ದಿನದ ಅಂಗವಾಗಿ ವಿಧಾನ ಪರಿಷತ್ತಿನಲ್ಲಿ ನಡೆದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಡದ ಕಾರಣಕ್ಕೆ ವಿಧಾನ ಪರಿಷತ್ ಸಚಿವಾಲಯದ ಉಪಕಾರ್ಯದರ್ಶಿ (ಆಡಳಿತ ವಿಭಾಗ) ಕೆ.ಜೆ.ಜಲಜಾಕ್ಷಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
‘ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಡದೇ ಅಗೌರವ ತೋರಲಾಗಿದೆ. ಇದು ಅತ್ಯಂತ ನೋವಿನ ಸಂಗತಿ. ಜಲಜಾಕ್ಷಿ ವಿರುದ್ಧ ಇಲಾಖಾ ವಿಚಾರಣೆ ನಡೆಸಲಾಗುವುದು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.