ADVERTISEMENT

ವಿವಿಧ ಮಸೂದೆಗಳಿಗೆ ಪರಿಷತ್‌ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2021, 20:41 IST
Last Updated 23 ಸೆಪ್ಟೆಂಬರ್ 2021, 20:41 IST

ಬೆಂಗಳೂರು: 2021ನೇ ಸಾಲಿನ ಧನ ವಿನಿಯೋಗ ಮಸೂದೆ (ಪೂರಕ ಅಂದಾಜು) ಸೇರಿದಂತೆ ವಿವಿಧ ಮಸೂದೆಗಳಿಗೆ ವಿಧಾನ ಪರಿಷತ್‌ ಗುರುವಾರ ರಾತ್ರಿ ಅಂಗೀಕಾರ ನೀಡಿತು.

ಧನ ವಿನಿಯೋಗ ಮಸೂದೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದರು. ಉಳಿದಂತೆ, ರಾಜ್ಯದಲ್ಲಿ ಆನ್‌ಲೈನ್‌ ಜೂಜು ಮತ್ತು ಬೆಟ್ಟಿಂಗ್‌ ನಿಷೇಧಿಸುವ ಕರ್ನಾಟಕ ಪೊಲೀಸ್‌ ತಿದ್ದುಪಡಿ ಮಸೂದೆ, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ, ಕರ್ನಾಟಕ ಸರಕು ಮತ್ತು ಸೇವೆಗಳ ತೆರಗೆ (ತಿದ್ದುಪಡಿ) ಮಸೂದೆ, ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ಮಸೂದೆ, ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯಘಗಳ ತಿದ್ದುಪಡಿ ಮಸೂದೆಗಳಿಗೆ ವಿಧಾನ ಪರಿಷತ್‌ ಅಂಗೀಕಾರ ನೀಡಿತು.

ವಿರೋಧ ಪಕ್ಷಗಳು ಕೇಳಿದ ಪ್ರಶ್ನೆಗಳಿಗೆ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ವಿವರಣೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.