ADVERTISEMENT

ವಿಧಾನ ಪರಿಷತ್‌: ಇಂದು ಮತ ಎಣಿಕೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2024, 20:34 IST
Last Updated 19 ಫೆಬ್ರುವರಿ 2024, 20:34 IST
ಪುಟ್ಟಣ್ಣ
ಪುಟ್ಟಣ್ಣ   

ಬೆಂಗಳೂರು: ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಮಂಗಳವಾರ ನಡೆಯಲಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆ ವ್ಯಾಪ್ತಿಯ ಮತದಾರರು ಫೆ.16ರಂದು ಮತದಾನ ಮಾಡಿದ್ದರು. ಒಟ್ಟು 19,152 ಮತಗಳ ಪೈಕಿ 16,544 ಮಂದಿ (ಪುರುಷರು 6,504, ಮಹಿಳೆಯರು 10,040) ಮತ ಚಲಾಯಿಸಿದರು.

ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ, ಬಿಜೆಪಿ– ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್‌ ಸೇರಿದಂತೆ ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿದ್ದಾರೆ. 

ADVERTISEMENT

ಈ ಹಿಂದೆ ಇದೇ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದ ಪುಟ್ಟಣ್ಣ ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾರ್ಚ್‌ನಲ್ಲಿ ರಾಜೀನಾಮೆ ನೀಡಿದ್ದರು. ಅಂದಿನಿಂದ ಖಾಲಿ ಉಳಿದಿದ್ದ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. 2026 ನವೆಂಬರ್ 11ರವರೆಗೆ ಈ ಸ್ಥಾನದ ಅವಧಿಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.