ADVERTISEMENT

ವಿಧಾನ ಪರಿಷತ್ ಕಲಾಪ ಬುಧವಾರಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2024, 7:51 IST
Last Updated 26 ಫೆಬ್ರುವರಿ 2024, 7:51 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಭಾನುವಾರ ನಿಧನರಾದ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ಸೋಮವಾರ ಬೆಳಿಗ್ಗೆ ವಿಧಾನ ಪರಿಷತ್‌ನಲ್ಲಿ ಸಂತಾಪ ಸೂಚಿಸಿದ ಬಳಿಕ ಸದನದ ಕಲಾಪವನ್ನು ಬುಧವಾರ ಬೆಳಿಗ್ಗೆ 9.30ಕ್ಕೆ ಮುಂದೂಡಲಾಯಿತು.

ಕಲಾಪ ಆರಂಭಕ್ಕೂ ಮೊದಲು ಸದನದ ಕಲಾಪ‌ ಸಲಹಾ ಸಮಿತಿ ಸಭೆ ನಡೆಯಿತು. ಹಾಲಿ‌ ಶಾಸಕರು ನಿಧನರಾಗಿರುವ ಕಾರಣದಿಂದ ಸಂತಾಪ ಸೂಚನದ ಬಳಿಕ ದಿನದ ಮಟ್ಟಿಗೆ ಕಲಾಪ ಮುಂದೂಡುವ ನಿರ್ಣಯ ಕೈಗೊಳ್ಳಲಾಗಿತ್ತು.

ADVERTISEMENT

ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಂತಾಪ ಸೂಚನಾ ನಿರ್ಣಯ ಮಂಡಿಸಿದರು. ಕಾನೂನು ಸಚಿವ ಎಚ್.ಕೆ. ಪಾಟೀಲ, ಸಭಾ ನಾಯಕ ಎನ್.ಎಸ್‌. ಬೋಸರಾಜು, ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವರು ಮಾತನಾಡಿದರು. ಬಳಿಕ ಒಂದು ನಿಮಿಷ ಮೌನಾಚರಣೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂತಾಪ‌ ಸೂಚನಾ ನಿರ್ಣಯದ ನಂತರ ಕಲಾಪ ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.