ADVERTISEMENT

ಸಾರಿಗೆ ನೌಕರರಿಂದ ವಿಧಾನಸೌಧ ಚಲೋ

​ಪ್ರಜಾವಾಣಿ ವಾರ್ತೆ
Published 5 ಜುಲೈ 2019, 19:08 IST
Last Updated 5 ಜುಲೈ 2019, 19:08 IST

ಬೆಂಗಳೂರು: ಸಾರಿಗೆ ಸಂಸ್ಥೆಗಳನ್ನು ಸರ್ಕಾರಕ್ಕೆ ವಿಲೀನ ಮಾಡಿಕೊಂಡು ಅಲ್ಲಿನ ನೌಕರರನ್ನೂ ಸರ್ಕಾರ ನೌಕರರೆಂದು ಪರಿಗಣಿಸಬೇಕು ಎಂದು ಒತ್ತಾಯಿಸಿ ಇದೇ 16ರಂದು ಹಮ್ಮಿಕೊಂಡಿರುವ ವಿಧಾನಸೌಧ ಚಲೋ ಪ್ರತಿಭಟನೆಗೆ ಹೋರಾಟಗಾರ ವಾಟಾಳ್ ನಾಗರಾಜ್ ಬೆಂಬಲ ಸೂಚಿಸಿದ್ದಾರೆ.

ಶುಕ್ರವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರದ ಆದೇಶದಂತೆ ಕಾರ್ಯ ನಿರ್ವಹಿಸುವ ಕೆಎಸ್‌ಆರ್‌ಟಿಸಿ ಸೇರಿ ನಾಲ್ಕೂ ಸಾರಿಗೆ ಸಂಸ್ಥೆಗಳ ನೌಕರರಿಗೆ ಯಾವುದೇ ಸೌಲಭ್ಯ ನೀಡದೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ.ಸರ್ಕಾರಿ ನೌಕರರಿಗೆ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನೂ ಈ ನೌಕರರಿಗೂ ನೀಡಬೇಕು’ ಎಂದು ಒತ್ತಾಯಿಸಿದರು.

‘ಈ ಸಂಬಂಧ ಮುಖ್ಯಮಂತ್ರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಈಗಲೂ ಸರ್ಕಾರ ನಿರ್ಲಕ್ಷ್ಯ ವಹಿಸಿದರೆಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.