ADVERTISEMENT

ಹೆಡ್ ಕಾನ್‌ಸ್ಟೆಬಲ್ ಸಾವು; ಚಿಕಿತ್ಸೆ ಸಿಗದ ಆರೋಪ

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 11:44 IST
Last Updated 3 ಜುಲೈ 2020, 11:44 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ನಗರದ ಠಾಣೆಯೊಂದರ ಹೆಡ್ ಕಾನ್‌ಸ್ಟೆಬಲೊಬ್ಬರು ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದು, ಕೊರೊನಾ ಸೋಂಕು ಶಂಕೆ ವ್ಯಕ್ತವಾಗಿದೆ. ಸೂಕ್ತ ಚಿಕಿತ್ಸೆ ಸಿಗದಿದ್ದರಿಂದ ಅವರು ಸಾವನ್ನಪ್ಪಿರುವ ಆರೋಪ ಕೇಳಿಬರುತ್ತಿದೆ.

ಪಶ್ಚಿಮ ವಿಭಾಗ ವ್ಯಾಪ್ತಿಯ ಠಾಣೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್‌ಸ್ಟೆಬಲ್ ಅವರಿಗೆ ಸೋಮವಾರ ಸಂಜೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡು ರಸ್ತೆ ಪಕ್ಕದಲ್ಲೇ ಕುಳಿತುಕೊಂಡಿದ್ದರು. ನಂತರ, ಸಹೋದ್ಯೋಗಿಗಳ ಸಹಾಯದಿಂದ ಆಸ್ಪತ್ರೆಗೆ ಹೋಗಿದ್ದರು.

ತೀವ್ರ ಉಸಿರಾಟದ ಸಮಸ್ಯೆ ಇದ್ದರೂ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಬೆಡ್‌ ಸಿಕ್ಕಿರಲಿಲ್ಲ. ಹಲವು ಆಸ್ಪತ್ರೆಯಲ್ಲಿ ಸುತ್ತಾಡಿದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ, ಅವರು ವಾಪಸು ಮನೆಗೆ ಬಂದು ಮಲಗಿದ್ದರು.

ADVERTISEMENT

ಮಂಗಳವಾರ ಬೆಳಿಗ್ಗೆ ಪುನಃ ಆರೋಗ್ಯ ಸಮಸ್ಯೆ ಉಂಟಾಗಿ ಸಾವನ್ನಪ್ಪಿದ್ದಾರೆ. ಅವರ ಗಂಟಲಿನ ದ್ರವನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಅದರ ವರದಿ ಬರಬೇಕಿದೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.