ADVERTISEMENT

ಹೆಡ್ ಕಾನ್‌ಸ್ಟೆಬಲ್ ಸಾವು; ಚಿಕಿತ್ಸೆ ಸಿಗದ ಆರೋಪ

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 16:42 IST
Last Updated 3 ಜುಲೈ 2020, 16:42 IST

ಬೆಂಗಳೂರು: ಪಶ್ಚಿಮ ವಿಭಾಗ ವ್ಯಾಪ್ತಿಯ ಠಾಣೆಯೊಂದರ ಹೆಡ್ ಕಾನ್‌ಸ್ಟೆಬಲ್‌ ಒಬ್ಬರು ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದು, ಕೊರೊನಾ ಸೋಂಕು ಶಂಕೆ ವ್ಯಕ್ತವಾಗಿದೆ.

ಹೆಡ್ ಕಾನ್‌ಸ್ಟೆಬಲ್‌ಗೆ ಗುರುವಾರ ಸಂಜೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡು ರಸ್ತೆ ಪಕ್ಕದಲ್ಲಿ ಕುಳಿತುಕೊಂಡಿದ್ದರು. ನಂತರ, ಸಹೋದ್ಯೋಗಿಗಳ ಸಹಾಯದಿಂದ ಆಸ್ಪತ್ರೆಗೆ ಹೋಗಿದ್ದರು.

ತೀವ್ರ ಉಸಿರಾಟದ ಸಮಸ್ಯೆ ಇದ್ದರೂ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಬೆಡ್‌ ಸಿಕ್ಕಿರಲಿಲ್ಲ. ಹಲವು ಆಸ್ಪತ್ರೆಗಳಿಗೆ ಸುತ್ತಾಡಿದರೂ ಪ್ರಯೋಜನವಾಗಿರಲಿಲ್ಲ. ಅವರು ವಾಪಸು ಮನೆಗೆ ಬಂದು ಮಲಗಿದ್ದರು.

ADVERTISEMENT

ಶುಕ್ರವಾರ ಬೆಳಿಗ್ಗೆ ಪುನಃ ಅನಾರೋಗ್ಯ ಕಾಣಿಸಿಕೊಂಡಿತ್ತು. ಅವರ ಗಂಟಲಿನ ದ್ರವನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಅದರ ವರದಿ ಬರಬೇಕಿದೆ‌. ’ಸಕಾಲಕ್ಕೆ ಚಿಕಿತ್ಸೆ ಸಿಗದ ಕಾರಣಕ್ಕೆ ಮೃತಪಟ್ಟಿದ್ದಾರೆ‘ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.