ADVERTISEMENT

ಬೈಕ್‌ನಲ್ಲಿ ಹಿಂಬಾಲಿಸಿ ಮೊಬೈಲ್ ಕಳವು:ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 21:18 IST
Last Updated 7 ಏಪ್ರಿಲ್ 2021, 21:18 IST
ಆರೋಪಿಯಿಂದ ವಶಕ್ಕೆ ಪಡೆದಿರುವ ಮೊಬೈಲ್‌ಗಳು ಹಾಗೂ ಬೈಕ್.
ಆರೋಪಿಯಿಂದ ವಶಕ್ಕೆ ಪಡೆದಿರುವ ಮೊಬೈಲ್‌ಗಳು ಹಾಗೂ ಬೈಕ್.   

ಬೆಂಗಳೂರು: ಬೈಕ್‌ನಲ್ಲಿ ಹಿಂಬಾಲಿಸಿ, ಸಾರ್ವಜನಿಕರಿಂದ ಮೊಬೈಲ್‌ಗಳನ್ನು ಕದ್ದು ಪರಾರಿಯಾಗುತ್ತಿದ್ದ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.

ನೆಲಮಂಗಲ ಟೌನ್‌ ನಿವಾಸಿ ಮಹಮದ್ ಸೂಫಿಯಾನ್ (20) ಬಂಧಿತ ಆರೋಪಿ.

ಮಾ.11ರಂದು ವಿಜಯನಗರದ 9ನೇ ಅಡ್ಡರಸ್ತೆಯ ಮೆಡಿಕಲ್ ಶಾಪ್ ಮುಂಭಾಗ ನಡೆದುಕೊಂಡು ಹೋಗುತ್ತಿದ್ದ ದಂಪತಿಯನ್ನು ಆರೋಪಿ ಹಿಂಬಾಲಿಸಿದ್ದ. ಬಳಿಕ ಮಹಿಳೆಯ ಕೈಯಲ್ಲಿದ್ದ ಮೊಬೈಲ್‌ ಕಸಿದು ಅಲ್ಲಿಂದ ಪರಾರಿಯಾಗಿದ್ದ. ಈ ಸಂಬಂಧ ವಿಜಯನಗರ ಪೊಲೀಸರಿಗೆ ಪತಿ ದೂರು ನೀಡಿದ್ದರು.

ADVERTISEMENT

‘ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಗರದ ವಿವಿಧ ಭಾಗಗಳಲ್ಲಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ವಿಚಾರವನ್ನು ತಿಳಿಸಿದ್ದ. ಈ ಸಂಬಂಧ ಆರೋಪಿಯಿಂದ ₹75 ಸಾವಿರ ಬೆಲೆ ಬಾಳುವ ಐದು ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.