ADVERTISEMENT

IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ಪ್ರಶ್ನಿಸಿ ಮೇಲ್ಮನವಿ: ನಾಳೆ ವಿಚಾರಣೆ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣ

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 5:42 IST
Last Updated 2 ಜುಲೈ 2025, 5:42 IST
<div class="paragraphs"><p>ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಿಕ್ಕಿರಿದು ಸೇರಿದ್ದ ಆರ್‌ಸಿಬಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದರು</p></div><div class="paragraphs"><p>&nbsp;</p></div>

ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಿಕ್ಕಿರಿದು ಸೇರಿದ್ದ ಆರ್‌ಸಿಬಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದರು

 

   

ಪ್ರಜಾವಾಣಿ ಚಿತ್ರ: ಪುಷ್ಕರ್‌ ವಿ

ADVERTISEMENT

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ದುರ್ಘಟನೆಯ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದಡಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು ಅಮಾನತ್ತುಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿರುವ ಕೇಂದ್ರೀಯ ಅಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಬುಧವಾರ ಬೆಳಿಗ್ಗೆ ಹೈಕೋರ್ಟ್ ದಿನದ ಕಲಾಪ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಹಾಜರಾದರು‌.

"ಮೇಲ್ಮನವಿಗೆ ಸಂಬಂಧಿಸಿದಂತೆ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು" ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಾಳೆ (ಜುಲೈ 3) ವಿಚಾರಣೆ ನಡೆಸುವುದಾಗಿ ತಿಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.