ಕೆ.ಆರ್.ಪುರ: ಶ್ರೀಕ್ಷೇತ್ರ ಧರ್ಮಸ್ಥಳ ಸುತ್ತಮುತ್ತ ನೂರಾರು ಅತ್ಯಾಚಾರ ಮತ್ತು ಕೊಲೆ ನಡೆದಿದೆ ಎಂಬ ಆರೋಪ ಸಂಬಂಧ ಪಾರದರ್ಶಕವಾದ ತನಿಖೆ ನಡೆಸುವಂತೆ ಒತ್ತಾಯಿಸಿ ಮಾರಗೊಂಡನಹಳ್ಳಿ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿದರು.
ಮಾರಗೊಂಡನಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಿಂದ ಅಂಬೇಡ್ಕರ್ ಪುತ್ಥಳಿವರೆಗೆ ಮೇಣದ ಬತ್ತಿ ಹಿಡಿದು ಕೈ ತೋಳಿಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು.
‘ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಸಾಕ್ಷಿ ಸಮೇತ ಪೊಲೀಸರಿಗೆ ದೂರು ನೀಡಿದ್ದಾರೆ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ’ ಎಂದು ಗ್ರಾಮಸ್ಥರು ಒತ್ತಾಯಿಸಿದರು.
ತೊಂದರೆ ಒಳಗಾದವರಿಗೆ ನ್ಯಾಯ ಕೊಡಿಸಬೇಕು. ಯಾರೇ ಪ್ರಭಾವಶಾಲಿ ವ್ಯಕ್ತಿಗಳಾಗಿದ್ದರೂ ಒತ್ತಡಕ್ಕೆ ಮಣಿಯಬಾರದು. ಪ್ರತಿಯೊಬ್ಬರೂ ಈ ಹೋರಾಟಕ್ಕೆ ಕೈಜೋಡಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.