ಬೆಂಗಳೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿರುವ ಕಿರುತೆರೆಯ ನಟರಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಬಸವೇಶ್ವರ ನಗರ ಠಾಣೆಯ ಪೊಲೀಸರು ಗುರುವಾರ ತೀವ್ರ ವಿಚಾರಣೆಗೆ ಒಳಪಡಿಸಿದರು.
‘ರೀಲ್ಸ್‌ನಲ್ಲಿ ಬಳಸಿದ್ದ ಮಚ್ಚು ಎಲ್ಲಿದೆ’ ಎಂದು ಪ್ರಶ್ನೆ ಕೇಳಿ ಮಾಹಿತಿ ಪಡೆದುಕೊಂಡರು. ಆದರೆ, ಅಸಲಿ ಮಚ್ಚು ಇನ್ನೂ ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಉದ್ಧೇಶ ಏನು? ಇನ್‌ಸ್ಟಾಗ್ರಾಂನ ‘ಬುಜ್ಜಿ’ ಖಾತೆಯಲ್ಲಿ ರೀಲ್ಸ್ ಅಪ್ಲೋಡ್ ಮಾಡಿ, ಬಳಿಕ ಡಿಲಿಟ್ ಮಾಡಿದ್ದು ಏಕೆ ಎಂದು ಪ್ರಶ್ನೆ ಕೇಳಿ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಮೊದಲ ದಿನದ ಕಸ್ಟಡಿಯಲ್ಲಿ ಆರೋಪಿಗಳ ವಿಚಾರಣೆ ನಡೆಸಲಾಗಿದೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೂ ಒಳಪಡಿಸಲಾಗಿದೆ. ಕಸ್ಟಡಿ ಅವಧಿ ಇನ್ನೂ ಎರಡು ದಿನ ಬಾಕಿಯಿದ್ದು, ರೀಲ್ಸ್ ಪ್ರಕರಣದ ಸಂಬಂಧ ವಿಚಾರಣೆ ಮುಂದುವರೆಯಲಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.